ಮಂಗಳವಾರ, ಮೇ 18, 2021
28 °C

ಕಡ್ಡಾಯ ಶಿಕ್ಷಣ ಕಾಯ್ದೆ ಜಾರಿಗೆ ಆಗ್ರಹ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಕ್ಕಳ ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರದೇ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಆಂದೋಲನದ ರಾಜ್ಯ ಘಟಕದ ಸದಸ್ಯರು ಗುರುವಾರ ನಗರದ ನೃಪತುಂಗ ರಸ್ತೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.



`ನೆರೆಯ ಆಂಧ್ರ ಪ್ರದೇಶ, ಮಹಾರಾಷ್ಟ್ರಗಳಲ್ಲಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ ಸರ್ಕಾರ ನಮ್ಮಲ್ಲಿನ್ನೂ ಸಾರ್ವಜನಿಕ ಅಭಿಪ್ರಾಯವನ್ನೂ ಸಂಗ್ರಹಿಸಿಲ್ಲ~ ಎಂದು ಬಾಲ ಕಾರ್ಮಿಕ ಪದ್ಧತಿ ವಿರೋಧಿ ಆಂದೋಲನದ ರಾಜ್ಯ ಘಟಕದ ಸಂಚಾಲಕ ನಾಗಸಿಂಹ ಜಿ. ರಾವ್ ಒತ್ತಾಯಿಸಿದರು.



ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ಜಿ. ನಾಯಕ್, `ಶಿಕ್ಷಣ ಇಲಾಖೆ ಈವರೆಗೆ ಕಾಯ್ದೆಯ ನಿಯಮಗಳ 16 ಕರಡುಗಳನ್ನು ಸಿದ್ಧಪಡಿಸಿದೆ. ನಿಯಮಗಳ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ~ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.