ಭಾನುವಾರ, ಜನವರಿ 19, 2020
23 °C

ಕಣ್ಣಿನ ಪೊರೆ ತಪಾಸಣೆ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ದೃಷ್ಟಿದಾನ ಯೋಜನೆಯಡಿ ಇಲ್ಲಿಯ ಜಿಇಎಫ್ ಕಣ್ಣಿನ ಆಸ್ಪತ್ರೆಯಲ್ಲಿ ಇದೇ 8, 15, 22 ಹಾಗೂ 29ರಂದು ಉಚಿತವಾಗಿ ಕಣ್ಣಿನ ಪೊರೆ ತಪಾಸಣೆ ಶಿಬಿರಗಳನ್ನು ಏರ್ಪಡಿಸಲಾಗಿದೆ.ಅಗತ್ಯವಿರುವವರಿಗೆ ಡಾ.ಸುಂದರರಾಮ ಶೆಟ್ಟಿ ನೇತೃತ್ವದಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ.ಸಮಸ್ಯೆ ಬಗೆಹರಿಸಲಿ:  `ರಾಜ್ಯದ ನೂತನ ಸರ್ಕಾರ ಯುವಜನರ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಿ ಯುವಜನರ ಆಶೋತ್ತರಗಳಿಗೆ ಸ್ಪಂದಿಸಬೇಕು' ಎಂದು ಡಿವೈಎಫ್‌ಐ ತಾಲ್ಲೂಕು ಘಟಕ ಮನವಿ ಮಾಡಿದೆ.ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎನ್.ಶ್ರೀನಿವಾಸಾಚಾರ್, `ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು.

ಶಿಕ್ಷಣದ ವ್ಯಾಪಾರೀಕರಣ ತಡೆಗಟ್ಟಿ ಸರ್ಕಾರಿ ಶಾಲಾ ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಮೂಲ ಸೌಲಭ್ಯ ಒದಗಿಸಬೇಕು' ಎಂದು ಒತ್ತಾಯಿಸಿದರು.ಘಟಕವು 18 ಅಂಶಗಳ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಿತು. ಕಾರ್ಯದರ್ಶಿ ಎಚ್.ಎನ್.ಮೋಹನ್‌ಬಾಬು ಹಾಜರಿದ್ದರು.

ಪ್ರತಿಕ್ರಿಯಿಸಿ (+)