ಭಾನುವಾರ, ಡಿಸೆಂಬರ್ 15, 2019
21 °C

ಕಣ್ಸೆಳೆದ ಮಕ್ಕಳ ಪಥ ಸಂಚಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಣ್ಸೆಳೆದ ಮಕ್ಕಳ ಪಥ ಸಂಚಲನ

ಬಂಗಾರಪೇಟೆ:  ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಯ ಆವರಣದಲ್ಲಿ ಗುರುವಾರ 63ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳ ಪಥ ಸಂಚಲನ ಕಣ್ಸೆಳೆಯಿತು

.

19 ಶಾಲೆಗಳ ಸುಮಾರು 500 ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ತಹಶೀಲ್ದಾರ್ ಎಸ್.ಎಂ.ಮಂಗಳಾ ಹಾಗೂ ಮುಖ್ಯ ಭಾಷಣಕಾರ ನಟರಾಜ್ ಮಾತನಾಡಿದರು. ಇದೇ ಸಂದರ್ಭದಲ್ಲಿ 2010ನೇ ಸಾಲಿನ ಕೆಎಎಸ್ ಪರೀಕ್ಷೆಯಲ್ಲಿ 2ನೇ ರ‌್ಯಾಂಕ್ ಗಳಿಸಿದ ತಾಲ್ಲೂಕಿನ ಸಕ್ಕನಹಳ್ಳಿ ಗ್ರಾಮದ ರೇಣುಕಾ ಅವರನ್ನು ಸನ್ಮಾನಿಸಲಾಯಿತು. ಶಾಸಕ ಅಧ್ಯಕ್ಷ ಎಂ.ನಾರಾ ಯಣಸ್ವಾಮಿ, ಪುರಸಭೆ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ತೇಜಾವೆಂಕಟರಾಮೇಗೌಡ, ಕಾರ್ಯನಿರ್ವಹಣಾಧಿಕಾರಿ ಸಿ.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಯರಾಜು, ಪಂಚಾಯತ್ ರಾಜ್ ಎಇಇ ರಾಮಕೃಷ್ಣಪ್ಪ, ಸರ್ಕಲ್ ಇನ್ಸಪೆಕ್ಟರ್ ಶಿವಕುಮಾರ್, ಪುರಸಭೆ ಪ್ರಭಾರ ಮುಖ್ಯಾಧಿಕಾರಿ ತೀರ್ಥಪ್ರಸಾದ್, ಕನ್ನಡ ಸಂಘದ ಅಧ್ಯಕ್ಷ ಎಂ.ಸುಬ್ರಮಣಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಗೌಡ, ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಪ್ಪಾಜಿಗೌಡ ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)