ಸೋಮವಾರ, ಮಾರ್ಚ್ 8, 2021
25 °C

ಕದನ ವಿರಾಮ ಉಲ್ಲಂಘಿಸಿದ ಪಾಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕದನ ವಿರಾಮ ಉಲ್ಲಂಘಿಸಿದ ಪಾಕ್‌

ಜಮ್ಮು (ಪಿಟಿಐ): ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಭಾನುವಾರ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರದ ಪೂಂಚ್‌ ವಲಯದ ಗಡಿ ನಿಯಂತ್ರಣ ರೇಖೆಯ ಎರಡು ಕಡೆ ಗುಂಡು ಹಾಗೂ ಶೆಲ್‌ ದಾಳಿ ನಡೆಸಿದೆ.

ಪಾಕಿಸ್ತಾನ ಸೇನೆಯು ನಾಲ್ಕು ತಿಂಗಳ ಬಳಿಕ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಪಾಕಿಸ್ತಾನ ಸೈನಿಕರು ಭಾರತೀಯ ಸೇನೆಯ ಶಿಬಿರಗಳನ್ನು ಗುರಿಯಾಗಿಸಿಕೊಂಡು ಗುಂಡು ಹಾಗೂ ಶೆಲ್‌ ದಾಳಿ ನಡೆಸಿದ್ದಾರೆ.

‘ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ದಾಳಿ ನಡೆಸಿದೆ’ ಎಂದು ರಕ್ಷಣಾ ಇಲಾಖೆ ವಕ್ತಾರ ಮನೀಶ್‌ ಮೆಹ್ತಾ ತಿಳಿಸಿದ್ದಾರೆ.

‘ಪಾಕಿಸ್ತಾನ ಸೇನೆ ಬೆಳಿಗ್ಗೆ 3 ಗಂಟೆಯಿಂದಲೂ ನಿರಂತರ ದಾಳಿ ನಡೆಸುತ್ತಿದೆ. ನಮ್ಮ ಸೈನಿಕರೂ ಪ್ರತಿದಾಳಿ ನಡೆಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.