ಶುಕ್ರವಾರ, ಮೇ 14, 2021
32 °C

ಕನಕಗಿರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ, ನಕಲು ರಹಿತ ಜಿಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಗಿರಿ:  ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ನಕಲು ಹಾಗೂ ಡಿಬಾರ್ ರಹಿತವಾಗಿ ನಡೆಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಟೆಲಿಂಗಾಚಾರ್ಯ ತಿಳಿಸಿದರು.ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.ಎಪ್ರಿಲ್ 2ರಿಂದ ಇಲ್ಲಿ ವರೆಗೆ ನಡೆದಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ, ಒಬ್ಬ ವಿದ್ಯಾರ್ಥಿ ಕೂಡ ಡಿಬಾರ್ ಆಗಿಲ್ಲ, ಪರೀಕ್ಷೆಗಳನ್ನು ನಕಲು ರಹಿತವಾಗಿ ನಡೆಸಲಾಗಿದೆ, ಇದು ರಾಜ್ಯಕ್ಕೆ ಮಾದರಿಯಾಗಿದೆ, ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳ ನೇತೃತ್ವದ ಜಾಗೃತ ದಳದ ಕಾಳಜಿ ಹಾಗೂ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.ಎಲ್ಲಾ ಅಧಿಕಾರಿಗಳ ಶ್ರಮದಿಂದ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಯಾವುದೇ ತೊಂದರೆ ಇಲ್ಲದೆ ನಡೆದಿವೆ ಎಂದು ಹರ್ಷ ವ್ಯಕ್ತಪಡಿಸಿದರು.ಈ ಸಲದ ಪರೀಕ್ಷೆಯ ಫಲಿತಾಂಶವನ್ನು ರಾಜ್ಯದಲ್ಲಿ 15 ನೇ ಸ್ಥಾನ ಪಡೆಯುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು. ಇದಕ್ಕೂ ಪೂರ್ವದಲ್ಲಿ ಅಧಿಕಾರಿ ಮಂಟೆಲಿಂಗಾಚಾರ್ಯ ಅವರು ಬಸಾಪಟ್ಟಣ, ಆರ‌್ಹಾಳ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿದರು ಎಂದು ತಿಳಿದಿದೆ.ಶಿಕ್ಷಣ ಸಂಯೋಜಕ ಎಂ. ಎಸ್. ಪಾಟೀಲ, ಉಪ ಪ್ರಾಂಶುಪಾಲ ಎಚ್. ಕೆ. ಚಂದ್ರಪ್ಪ, ಸ್ಥಾನಿಕ ಜಾಗೃತ ದಳದ ಅಧಿಕಾರಿ ಕೆ. ಶರಬಣ್ಣ, ಟಿ. ಎಲ್. ಶಿರಿವಾರ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.