ಭಾನುವಾರ, ಜೂಲೈ 12, 2020
29 °C

ಕನಕದಾಸರ ಆದರ್ಶ ಅಳವಡಿಸಿಕೊಳ್ಳಲು ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ಕನಕದಾಸರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ತತ್ವಾದರ್ಶಗಳನ್ನು ಇಂದಿನ ಯುವಪೀಳಿಗೆ ಮೈಗೂಡಿಸಿಕೊಳ್ಳುವ  ಮೂಲಕ ದಾಸರ ಹೆಸರನ್ನು ಉಳಿಸಬೇಕಿದೆ ಎಂದು ಜಾಜೂರು ಜಿಲ್ಲಾ ಪಂಚಾಯ್ತಿ ನೂತನ ಸದಸ್ಯ ಜೆ.ಪಿ. ಜಯಪಾಲಯ್ಯ ಅಭಿಪ್ರಾಯಪಟ್ಟರು.ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಹೋಬಳಿ ಪಗಡಲಬಂಡೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಆಚರಣೆಯ ಮೆರವಣಿಗೆ ಉದ್ಘಾಟಿಸಿ ಅವರು ಮಾತನಾಡಿದರು.ದಾಸರು ಜೀವಿತ ಅವಧಿಯಲ್ಲಿ ನೊಂದವರ ಮತ್ತು ಕೆಳಸಮುದಾಯಗಳ ಪರವಾಗಿ ತಮ್ಮ ಚಿಂತನೆಗಳನ್ನು ಹರಿಯಬಿಡುವ ಮೂಲಕ ಇಡೀ ಸಮಾಜಕ್ಕೆ ಸಾಮಾಜಿಕ ಅರಿವನ್ನು ಮೂಡಿಸುವ ಕಾರ್ಯ ಮಾಡಿದ್ದಾರೆ. ಪ್ರತಿಯೊಬ್ಬರೂ ಕನಕದಾಸರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಬೇಕಾಗಿದೆ. ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಕನಕದಾಸರ  ಪರಿಚಯದ ದರ್ಶನ ಮಾಡಿಸಬೇಕು ಎಂದು ನುಡಿದರು.ಇಡೀ ನಾಡಿಗೆ ಕೀರ್ತನೆಗಳ ಮೂಲಕ ಪ್ರಸಿದ್ಧಿಯಾಗಿರುವ ಕನಕದಾಸರು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸದೇ. ಸಮಾಜದಲ್ಲಿರುವ ಎಲ್ಲಾ ಸಮುದಾಯದವರೂ ಇಂತಹ ಮಹಾಪುರುಷರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.ಜಾಜೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಆರಿಸಿಬಂದ ನಂತರ ಮೊದಲ ಕಾರ್ಯಕ್ರಮ ಇದಾಗಿದೆ ಎಂದರು. ಕಾರ್ಯಕ್ರಮದಲ್ಲಿ  ಜಾಜೂರು ತಾಲ್ಲೂಕು ಪಂಚಾಯ್ತಿ ಸದಸ್ಯ ಯು. ಮಲ್ಲಿಕಾರ್ಜುನ ಮಾತನಾಡಿದರು. ಗ್ರಾಮ ಪಂಚಾಯ್ತಿ ಸದಸ್ಯ ಶಾಂತವೀರಯ್ಯ ಉಪಸ್ಥಿತರಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.