ಶುಕ್ರವಾರ, ಮೇ 20, 2022
26 °C

ಕನಕಪುರ: ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕನಕಪುರದ ಹಲಸಿನ ಮರದೊಡ್ಡಿ ಕೆಂಪರಾಜು, ಕನಕಪುರ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ಅಧ್ಯಕ್ಷರಾಗಿ ಸಾತನೂರಿನ ನಾಗರಾಜು ಆಯ್ಕೆಯಾಗಿದ್ದಾರೆ. 

 

ಲೋಕಸಭಾ ಕ್ಷೇತ್ರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆಂಪರಾಜು ಅಭಿನಂದನೆ ಸ್ವೀಕರಿಸಿ ಮಾತನಾಡಿ ಕಾಂಗ್ರೆಸ್ ಪಕ್ಷಕೆ ಯುವಕರನ್ನು ಸಂಘಟಿಸಲು ಹಾಗೂ ಅರ್ಹರಿಗೆ ಅವಕಾಶ ಕಲ್ಪಿಸಲು ಕಾಂಗ್ರೆಸ್ ಪಕ್ಷದ ಯುವ ನೇತಾರ ರಾಹುಲ್‌ಗಾಂಧಿಯವರು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲೇ ಯುವ ಅಧ್ಯಕ್ಷರ ಚುನಾವಣೆ ನಡೆಸಿದ್ದಾರೆ.ರಾಷ್ಟ್ರವ್ಯಾಪ್ತಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು  ಕಾಂಗ್ರೆಸ್ ಚುನಾವಣಿಯ ಮೂಲಕ ಕಾಂಗ್ರೆಸ್ ಸೇರ್ಪಡೆಗೊಂಡು ಉತ್ತಮ ಪಕ್ಷವಾಗಿ ದೇಶದಲ್ಲಿ ರೂಪಿಸುವ ಕಾರ್ಯವನ್ನು ಯುವಜನತೆ ಮಾಡಬೇಕಾಗಿದೆ ಎಂದರು.ಕನಕಪುರ ಕ್ಷೇತ್ರದ ಶಾಸಕರಾದ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಲ್ಲಿ ಯುವ ಸಮೂಹಕ್ಕೆ ಹೆಚ್ಚಿನ ನಾಯಕತ್ವ ನೀಡಲು ಮುಂದಾಗಿದ್ದು ಆ ದಿಸೆಯಲ್ಲಿ ಕನಕಪುರ ತಾಲ್ಲೂಕಿನಲ್ಲಿ 11 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ನೀಡಿರುವುದರಿಂದ  ರಾಜ್ಯದಲ್ಲಿ ಎರಡನೇ ಸ್ಥಾನವನ್ನು ಪಡೆದು ಕೊಂಡಿದೆ ಎಂದರು.ಮುಂದಿನ ದಿನಗಳಲ್ಲಿ 50 ಸಾವಿರಕ್ಕೂ ಹೆಚ್ಚುಮಂದಿ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯುವಕರನ್ನು ಸಂಘಟಿಸುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುತ್ತೇವೆ, ಇದಕ್ಕೆ ಪಕ್ಷದ ನಾಯಕರ ಬೆಂಬಲ ಅಗತ್ಯವಾಗಿ ಬೇಕಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.