ಗುರುವಾರ , ಏಪ್ರಿಲ್ 22, 2021
29 °C

ಕನಕ ಜಯಂತಿ ರಾಜ್ಯಮಟ್ಟದ ಆಚರಣೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ರಾಜ್ಯ ಮಟ್ಟದ ಕಾರ್ಯಕ್ರಮವಾಗಿ  ಡಿ.1 ರಂದು ಜಿಲ್ಲೆಯ ಕಾಗಿನೆಲೆಯಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ



ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ನಡೆದ ಕನಕದಾಸರ ಜಯಂತ್ಯುತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಈ ವಿಷಯ ತಿಳಿಸಿದರು.



ಇದೇ ಸಮಾರಂಭದಲ್ಲಿ  `ಕನಕ~ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕನಕದಾಸರ ಬದುಕು-ಬರಹ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮ  ಏರ್ಪಡಿಸಲಾಗುವುದು ಎಂದು ಉದಾಸಿ  ತಿಳಿಸಿದರು. 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.