ಗುರುವಾರ , ಜೂನ್ 17, 2021
22 °C

ಕನಿಮೊಳಿಗೆ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 2ಜಿ ಹಗರಣ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೊಳಿ ಅವರಿಗೆ ಸಂಸತ್ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕೋರ್ಟ್ ಅನುಮತಿ ನೀಡಿದೆ.

ಈ ಸಂಬಂಧ ಕನಿಮೊಳಿ ಸಲ್ಲಿಸಿದ್ದ ಅರ್ಜಿ ಬಗ್ಗೆ ಸಿಬಿಐ ಆಕ್ಷೇಪ ಎತ್ತದ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಅನುಮತಿ ಆದೇಶ ಪ್ರಕಟಿಸಿದರು.

ಆದರೆ ಅಧಿವೇಶನದ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗೆ ಕನಿಮೊಳಿ ಅವರ ಬದಲಿಗೆ ಅವರ ವಕೀಲರು ಹಾಜರಾಗಬೇಕೆಂದು ಷರತ್ತು ವಿಧಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.