ಶಿವಮೊಗ್ಗ: ಕಾರ್ಮಿಕರ ವೃತ್ತಿಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿ ಮಾಡುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ನೇತೃತ್ವದಲ್ಲಿ ಕಾರ್ಮಿಕರು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.

ಎಲ್ಲಾ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ತುರ್ತು ಕ್ರಮಕೈಗೊಳ್ಳಬೇಕು. ಅಕುಶಲ ಕಾರ್ಮಿಕರಿಗೆ ್ಙ 10 ಸಾವಿರ ಮಾಸಿಕ ವೇತನ ನಿಗದಿ ಮಾಡಬೇಕು. ಕಾರ್ಮಿಕರ ವೃತ್ತಿಗೆ ಅನುಗುಣವಾಗಿ ಅಕುಶಲ, ಅರೆಕುಶಲ, ಕುಶಲ ಮತ್ತು ಅತಿ ಕುಶಲ ಎಂದು ವಿಭಾಗಿಸಿ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿ ಆರು ತಿಂಗಳಿಗೊಮ್ಮೆ ತುಟ್ಟಿ ಭತ್ಯೆ ಪರಿಷ್ಕರಿಸುವ ಕೇಂದ್ರ ಸರ್ಕಾರದ ಯೋಜನೆ ಸ್ವಾಗತಾರ್ಹವಾಗಿದೆ. ಇದೇ ನೀತಿಯನ್ನು ರಾಜ್ಯ ಸರ್ಕಾರವೂ ಜಾರಿ ಮಾಡಬೇಕು. ಸರ್ಕಾರ ಕಾರ್ಮಿಕರಿಗೆ ಸಂಬಂಧಿಸಿದಂತೆ ತ್ರಿಪಕ್ಷೀಯ ಸಮಿತಿಗಳನ್ನು ರಚನೆ ಮಾಡುವಾಗ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಆಶಾ, ಅಂಗನವಾಡಿ ಸೇರಿದಂತೆ ಇತರೆ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಕೆಲಸದ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಿರುವುದು ಸ್ವಾಗತಾರ್ಹ. ದಿನೆ ದಿನೇ ಈ ಮಂಡಳಿಗಳಿಗೆ ಸೇರ್ಪಡೆ ಆಗುವ ಸದಸ್ಯರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಉತ್ತಮ ಸೇವೆಯನ್ನು ಪರಿಣಾಮಕಾರಿಯಾಗಿ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಮಂಡಳಿಗಳಿಗೆ ಪ್ರತ್ಯೇಕ ಅಧಿಕಾರಿ ವರ್ಗ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಬಿಸಿಯೂಟ ತಯಾರಕರು ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ಭದ್ರತೆ ಹಾಗೂ ಸೌಲಭ್ಯಗಳನ್ನು ನೀಡಿಲ್ಲ. ಆದರೆ, ಸರ್ಕಾರ ಬಿಸಿಯೂಟ ತಯಾರಿಯನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಇದರಿಂದ ಸಾವಿರಾರು ನೌಕರರು ಬೀದಿಗೆ ಬರಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಿ.ಎಸ್.ನಾಗರಾಜ್, ಎಸ್.ಬಿ.ಶಿವಶಂಕರ್, ಎಂ.ನಾರಾಯಣ, ಹನುಮಂತಪ್ಪ, ಅಕ್ಕಮ್ಮ, ವೇಲು, ವಸಂತ್, ರಂಗೇಗೌಡ, ಕುಲಕರ್ಣಿ, ಸದಾಶಿವ ಲಿಂಗೇಗೌಡ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.