ಮಂಗಳವಾರ, ಮೇ 11, 2021
26 °C

ಕನಿಷ್ಠ ವೇತನದಿಂದ ವಂಚನೆ ಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ `ಡಿ~ ದರ್ಜೆಯ ಸಿಬ್ಬಂದಿಗೆ ಕನಿಷ್ಠ ವೇತನ ನೀಡುವುದು ಸರ್ಕಾರದ ಕರ್ತವ್ಯ. ಇದರಿಂದ ಅವರನ್ನು ವಂಚಿಸಬಾರದು~ ಎಂದು ಹೈಕೋರ್ಟ್ ಗುರುವಾರ ಸರ್ಕಾರಕ್ಕೆ ಸೂಚಿಸಿದೆ.ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ತಮಗೆ ದಿನಗೂಲಿ ಸಿಗುತ್ತಿಲ್ಲ ಎಂದು ದೂರಿ ಸಲ್ಲಿಸಲಾಗಿರುವ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಮೌಖಿಕವಾಗಿ ಈ ಸೂಚನೆ ನೀಡಿದೆ.ಹೀಗೆ ಕನಿಷ್ಠ ವೇತನದಿಂದ ನೌಕರರನ್ನು ವಂಚಿಸುವುದು ಸರಿಯಲ್ಲ. ಕೇಂದ್ರದ ಅಧಿಸೂಚನೆ ಅನ್ವಯ ರಾಜ್ಯದಲ್ಲಿ ಯಾವ ರೀತಿ ವೇತನ ನೀಡಲಾಗುತ್ತಿದೆ~ ಎಂಬ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.