ಮಂಗಳವಾರ, ಏಪ್ರಿಲ್ 20, 2021
32 °C

ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಿ: ಸದಾನಂದಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಿ: ಸದಾನಂದಗೌಡ

ಮಹದೇವಪುರ: `ರಾಜ್ಯದಲ್ಲಿ ವೋಲ್ವೊ ಕಂಪೆನಿಯು ಹೆಚ್ಚು ಘಟಕಗಳನ್ನು ಸ್ಥಾಪಿಸುವ ಮೂಲಕ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ನೀಡಲು ಮುಂದಾಗಬೇಕು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಗುರುವಾರ ಇಲ್ಲಿ ಮನವಿ ಮಾಡಿದರು.ವೋಲ್ವೊ ಕಂಪೆನಿಯು ನಗರದ ವೈಟ್‌ಫೀಲ್ಡ್‌ನಲ್ಲಿರುವ ಎಂ.ಎಲ್.ಆರ್. ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಂಪೆನಿಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.`ನಗರದ ಹೊಸಕೋಟೆಯಲ್ಲಿ ಕಂಪೆನಿಯ ಘಟಕವು ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಹಲವೆಡೆ ಕಂಪೆನಿಯ ಇಂತಹ ಘಟಕಗಳನ್ನು ಸ್ಥಾಪಿಸುವ ಮೂಲಕ ರಾಜ್ಯದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡಬೇಕು~ ಎಂದು ಅವರು ಕೋರಿದರು.`ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಲು ವೋಲ್ವೊ ಬಸ್‌ಗಳ ಉತ್ತಮ ಸೇವೆ ಕೂಡ ಕಾರಣ~ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.ಸ್ವೀಡನ್‌ನ ವೋಲ್ವೊ ಬಸ್ ಕಾರ್ಪೊರೇಷನ್ ಅಧ್ಯಕ್ಷ ಮತ್ತು ಸಿಇಓ ಹಕನ್ ಕಾರ್ಲ್‌ಸನ್, ಸಚಿವರಾದ ಆರ್. ಅಶೋಕ, ಬಿ.ಎನ್.ಬಚ್ಚೇಗೌಡ, ಶಾಸಕ ಅರವಿಂದ ಲಿಂಬಾವಳಿ ಇತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.