ಭಾನುವಾರ, ಜೂನ್ 20, 2021
23 °C
‘ಮುಖ್ಯಮಂತ್ರಿ’ ಚಂದ್ರು ಒತ್ತಾಯ

ಕನ್ನಡಿಗರಿಗೇ ಉದ್ಯೋಗ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳನ್ನು ಪೂರ್ಣವಾಗಿ ಕನ್ನಡಿಗರಿಗೇ ಮೀಸಲಿಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಒತ್ತಾಯಿಸಿದ್ದಾರೆ.ನಿಗಮದಲ್ಲಿ ಖಾಲಿ ಇರುವ ಕಾವಲುಗಾರ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರ ಮೇಲೆ ಉತ್ತರ ಭಾರತೀ­ಯ­ರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ ನಿಗ­ಮವು ಸಾರ್ವಜನಿಕರೊಂದಿಗೆ ಇಂಗ್ಲಿಷ್‌ ಭಾಷೆಯಲ್ಲಿ ಪತ್ರ ವ್ಯವಹಾರ ನಡೆಸುವ ಮೂಲಕ ಕನ್ನಡವನ್ನು ನಿರ್ಲಕ್ಷಿಸ­ಲಾಗಿದೆ ಎಂದು ದೂರಿದ್ದಾರೆ.ನಿಗಮದ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಆಡಳಿತ ಹಾಗೂ ನಾಮಫಲಕಗಳಲ್ಲಿ ಕಡ್ಡಾಯ­ವಾಗಿ ಕನ್ನಡವನ್ನೇ ಬಳಸುವಂತೆ ಸಂಬಂಧಪಟ್ಟ­ವ­ರಿಗೆ ನಿರ್ದೇ­ಶನ ನೀಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.‘ಮಾತೃ ಭಾಷಾ ವಿವಾದ ಕುರಿತು ಸುಪ್ರೀಂಕೋರ್ಟ್‌ನ ಸಂವಿಧಾನ ಪೀಠ ವಿಚಾರಣೆ­ಯನ್ನು ಕಾಯ್ದಿರಿಸಿದೆ. ವಿಚಾರಣೆ ಸಂದರ್ಭದಲ್ಲಿನ ಬೆಳವಣಿಗೆಗಳನ್ನು ನೋಡಿದರೆ ತೀರ್ಪು ನಮ್ಮ ವಿರುದ್ಧ ಬರುವ ಸಾಧ್ಯತೆ ಇದೆ. ಈ ಕಾರಣದಿಂದ ಮಾತೃ­ಭಾಷಾ ಶಿಕ್ಷಣದ ಬಗ್ಗೆ ಒಲವು ಇರುವ ರಾಜ್ಯಗಳು ಒಂದಾಗಿ ಸಮಗ್ರ ಭಾಷಾ ಮಾಧ್ಯಮ ನೀತಿ ರೂಪಿಸಲು ಮುಂದಾ­ಗ­ಬೇಕು. 10ನೇ

ತರಗತಿವರೆಗೆ ಭಾಷಾ ಮಾಧ್ಯಮ­ದಲ್ಲೇ ಶಿಕ್ಷಣ ನೀಡಬೇಕು’ ಎಂದು ಚಂದ್ರು ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.