ಶನಿವಾರ, ಮೇ 8, 2021
19 °C

ಕನ್ನಡಿಗರ ಉದಾರತೆ ಅನನ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಹೊರದೇಶದವರಿಗೆ ಕರ್ನಾಟಕ ಎಂದರೆ ಗೊತ್ತಿಲ್ಲ. ಆದರೆ, ಬೆಂಗಳೂರು ಎಲ್ಲ ದೇಶದವರಿಗೂ ತಿಳಿದಿದೆ~ ಎಂದು ಗೃಹ ಸಚಿವ ಆರ್. ಅಶೋಕ ಹೇಳಿದರು. ನಗರದ ಪದ್ಮನಾಭನಗರದ ವಾರ್ಡ್‌ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ ದಿನಾಚರಣೆಯಲ್ಲಿ ಅವರು ಮಾತನಾಡಿದರು.`ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರು ಈಗ ನಗರ ಬೆಳದಿರುವುದನ್ನು ನೋಡಿ ಆಶ್ಚರ್ಯಪಡುತ್ತಿದ್ದರು. ಸಾಫ್ಟ್‌ವೇರ್ ಕಂಪೆನಿಗಳು ಮತ್ತು ಹೊರರಾಜ್ಯದಿಂದ ವೃತ್ತಿಗಾಗಿ ಬಂದವರು ಇಲ್ಲಿಯೇ ನೆಲೆಸಿದ್ದಾರೆ. ಬೆಂಗಳೂರು ಅವರಿಗೆಲ್ಲ ಅಚ್ಚುಮೆಚ್ಚಿನ ಸ್ಥಳವಾಗಿದೆ~ ಎಂದರು.`ನಮ್ಮ ಕರ್ನಾಟಕದ ಜನತೆಯೂ ಸಹ ಹೃದಯ ವೈಶಾಲ್ಯತೆಯನ್ನು ಹೊಂದಿದ್ದಾರೆ. ಯಾರು ಯಾವ ಭಾಷೆಯಲ್ಲಿ ಮಾತನಾಡಿದರೂ ಅವರಿಗೆ ಸ್ಪಂದಿಸುತ್ತಾರೆ. ಅದಕ್ಕಾಗಿಯೇ ಬೆಂಗಳೂರನ್ನು ಎಲ್ಲರೂ ಪ್ರೀತಿಸುತ್ತಾರೆ~ ಎಂದರು.ಬಿಬಿಎಂಪಿ ಸದಸ್ಯ ಬಿ.ಎಸ್.ವೆಂಕಟಸ್ವಾಮಿ ನಾಯ್ಡು, ಬಿಇಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಕೃಷ್ಣಪ್ಪ, ಬಿಜೆಪಿ ಮುಖಂಡ ನಾಗಭೂಷಣ ನಾಯ್ಡು ಮತ್ತಿತರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.