ಶನಿವಾರ, ಏಪ್ರಿಲ್ 17, 2021
23 °C

ಕನ್ನಡ ಅಧಿಕಾರಿಗಳ ಮೇಲೆ ಶಿವಸೇನೆ ಕಾರ್ಯಕರ್ತರ ಹಲ್ಲೆ: ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕರ್ತವ್ಯದ ಮೇಲೆ ತೆರಳಿದ ಕನ್ನಡಿಗ ಅಧಿಕಾರಿಗಳ ಮೇಲೆ ಶಿವಸೇನೆ ಕಾರ್ಯಕರ್ತರು ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ಹೇಳಿದ್ದಾರೆ.ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರದಲ್ಲಿ  ಶಿಗ್ಗಾವಿ ಏತ ನೀರಾವರಿ ಯೋಜನೆ ಉದ್ಘಾಟನೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಧಿಕಾರಿಗಳು ಯಾವ ಭಾಷೆಯವರೇ ಆಗಲಿ, ರಾಜ್ಯದಲ್ಲಿಯೇ ಆಗಲಿ ಜನಸೇವೆಯಲ್ಲಿ ಇರುತ್ತಾರೆ.

ಅವರಿಗೆ ಅಗತ್ಯ ಸಹಾಯ ಸಹಕಾರ ಹಾಗೂ ರಕ್ಷಣೆ ನೀಡಬೇಕಾಗಿರುವುದು ಆ ಸರ್ಕಾರದ ಕರ್ತವ್ಯ. ಆದರೆಕ ಕನ್ನಡಿಗರ ಮೇಲೆ ಹಲ್ಲೆ ನಡೆಸುವುದನ್ನು ತಡೆಯುವಲ್ಲಿ ಆ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.ಇಂತಹ ಘಟನೆಗಳು ಮರುಕಳಿಸದಂತೆ ಮಹಾರಾಷ್ಟ್ರ ಸರ್ಕಾರ ನೋಡಿಕೊಳ್ಳಬೇಕು. ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.  ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ದೇಶದ ಪ್ರತಿಯೊಬ್ಬ ಪ್ರಜೆ ದೇಶದ ಯಾವ ರಾಜ್ಯಕ್ಕಾದರೂ ಹೋಗಬಹುದು, ಬರಬಹುದು ಅದನ್ನು ತಡೆಯುವ ಅಧಿಕಾರ ಯಾರಿಗೂ ಇಲ್ಲ. ಇಂತಹ ಘಟನೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.