ಮಹಾಲಿಂಗಪುರ: ರಾಷ್ಟ್ರ ಮಟ್ಟದ ವ್ಯವಹಾರಗಳನ್ನು ಹೊರತು ಪಡಿಸಿ ರಾಜ್ಯ ಆಡಳಿತದ ಎಲ್ಲ ಕಡತಗಳೂ ಮಾತೃ ಭಾಷೆ ಕನ್ನಡದಲ್ಲೇ ತಯಾರಿಸಿ ಎಲ್ಲ ಹಂತಗಳಲ್ಲೂ ಕನ್ನಡದ ಅನುಷ್ಠಾನವಾಗುವಂತೆ ನೋಡಿಕೊಳ್ಳಬೇಕು. ಸಭೆಯಲ್ಲಿ ಯಾವುದೇ ಅಧಿಕಾರಿಗಳು ತಪ್ಪು ಮಾಹಿತಿ ನೀಡದೆ ಪಾರದರ್ಶಕತೆಯಿಂದ ಆಡಳಿತ ನಡೆಸಬೇಕು. ಶೌಚಾಲಯ ನಿರ್ಮಾಣ, ಶುಚಿತ್ವ, ಶುದ್ಧ ಕುಡಿಯುವ ನೀರಿನ ಸರಬರಾಜು ಸಮರ್ಪಕವಾಗಿ ಮಾಡಬೇಕು ಎಂದು ಎಲ್ಲ ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರಿ ಹೇಳಿದರು.

ಇಲ್ಲಿಯ ಪುರಸಭೆ ಸಭಾ ಭವನದಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. `ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕತೆಯಿಂದ ಕಾರ್ಯ ಮಾಡಿದಲ್ಲಿ ಜನರ ವಿಶ್ವಾಸ ಗಳಿಸುವುದರ ಜೊತೆಗೆ ರಾಜ್ಯದ ಅಭಿವೃದ್ಧಿಯೂ ಸಾಧ್ಯ' ಎಂದ ಅವರು, ತಮ್ಮಲ್ಲಿಗೆ ಕೆಲಸಕ್ಕಾಗಿ ಬರುವ ಯಾರಿಂದಲೂ ಏನನ್ನೂ ಅಪೇಕ್ಷಿಸದೇ ನಿಗದಿತ ವೇಳೆಯಲ್ಲಿ ಅವರ ಕೆಲಸ ಮಾಡಿಕೊಡಲು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಭೆಗೆ ಮುಂಚೆ ಸಚಿವೆಯಾಗಿ ಪ್ರಥಮ ಬಾರಿಗೆ ಪಟ್ಟಣಕ್ಕೆ ಆಗಮಿಸಿದ ಉಮಾಶ್ರಿ ಅವರನ್ನು ಪುರಸಭೆ, ತಹಶೀಲ್ದಾರ್ ಕಾರ್ಯಾಲಯ, ಅಂಗನವಾಡಿ ಕೇಂದ್ರಗಳು ಹಾಗೂ ಗ್ರಾಮ ಪಂಚಾಯ್ತಿಗಳು ತಮ್ಮ ತಮ್ಮ ಇಲಾಖೆಗಳ ಪರವಾಗಿ ಸಚಿವರನ್ನು ಸತ್ಕರಿಸಿದವು.

ಜಮಖಂಡಿ ಉಪ ವಿಭಾಗಾಧಿಕಾರಿ ಅಶೋಕ ದುಡಗುಂಟಿ, ತಾಲ್ಲೂಕು ದಂಡಾಧಿಕಾರಿ ಎಂ.ಎನ್. ಚೋರಗಸ್ತಿ, ಮುಖ್ಯಾಧಿಕಾರಿ ವಿಜಯ ಮೆಕ್ಕಳಕಿ, ಜಿಎಲ್ಬಿಸಿಯ ಸಂಕಣ್ಣವರ, ಶಿರಸ್ತೇದಾರ್ ರಂಗನಾಥ, ಹೆಸ್ಕಾಂ ನ ಮಹಾಲಿಂಗಪ್ಪ ಧಡೂತಿ, ಕಂದಾಯ ಅಧಿಕಾರಿ ರಮೇಶ ಜಾಧವ ಸೇರಿದಂತೆ ತೇರದಾಳ ಮತಕ್ಷೇತ್ರ ವ್ಯಾಪ್ತಿಯ ಮುಧೋಳ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.