ಔರಾದ್: ಈ ತಾಲ್ಲೂಕು ಗಡಿಭಾಗವಾದ್ದರಿಂದ ಇಲ್ಲಿ ಕನ್ನಡ ಕೆಲಸ ಮಾಡುವವರಿಗೆ ಹೆಚ್ಚಿನ ಹೊಣೆ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು.

ಇಲ್ಲಿಯ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಶನಿವಾರ ನಡೆದ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾಗತೀಕರಣ ಭರಾಟೆಯಲ್ಲಿ ಕನ್ನಡ ಭಾಷೆ ಮರೆಯಬಾರದು. ಕನ್ನಡ ಭಾಷೆಗೆ ತನ್ನದೇ ಆದ ಗಟ್ಟಿತನ ಇದೆ. ಈ ಕಾರಣದಿಂದಾಗಿ ಎಸ್ಎಸ್ಎಲ್ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ಸಾಕಷ್ಟು ವಿದ್ಯಾರ್ಥಿಗಳು ಮುಂದೆ ಪಿಯುಸಿ ಮತ್ತು ಸಿಇಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಐಎಎಸ್, ಕೆಎಎಸ್ನಲ್ಲೂ ನಮ್ಮ ವಿದ್ಯಾರ್ಥಿಗಳ ಸಾಧನೆ ಉತ್ತಮವಾಗಿದೆ ಎಂದರು.

ಗ್ರಾಮೀಣ ಭಾಗದ ಪಾಲಕರಲ್ಲಿ ಈ ಎಲ್ಲ ವಿಷಯ ಮನದಟ್ಟು ಮಾಡಿಕೊಟ್ಟು ತಮ್ಮ ಮಕ್ಕಳಿಗೆ ಕನ್ನಡ ಶಾಲೆಯಲ್ಲಿ ಓದಿಸುವಂತೆ ಪ್ರೋತ್ಸಾಹಿಸಬೇಕು. ಈ ಕೆಲಸ ಇಲ್ಲಿಯ ಪರಿಷತ್ತಿನ ಪದಾಧಿಕಾರಿಗಳು ಮತ್ತು ಕನ್ನಡ ಅಭಿಮಾನಿಗಳು ಮಾಡಬೇಕಾಗಿದೆ ಎಂಬ ಕಿವಿ ಮಾತು ಹೇಳಿದರು.

ನಿಕಟಪೂರ್ವ ಅಧ್ಯಕ್ಷ ಪ್ರಶಾಂತ ಮಠಪತಿ ಮಾತನಾಡಿ, ತಾಲ್ಲೂಕಿನ ದಾಬಕಾ ಮತ್ತು ಚಿಂತಾಕಿ ವಲಯ ಸಮ್ಮೇಳನ ಮಾಡುವ ಮೂಲಕ ಅಲ್ಲಿಯ ಅನ್ಯ ಭಾಷಿಕರಲ್ಲಿ ನಾಡು ನುಡಿಯ ಅಭಿಮಾನ ಮೂಡಿಸಲಾಗಿದೆ. ಇಲ್ಲಿ ಕನ್ನಡ ಕಟ್ಟುವುದು ಅಷ್ಟು ಸುಲಭವಲ್ಲ. ಎಲ್ಲರ ಸಹಕಾರ ಇದ್ದರೆ ಮಾತ್ರ ಇಲ್ಲಿ ಕನ್ನಡ ಕೆಲಸಗಳು ಸುಗಮವಾಗಿ ನಡೆಯುತ್ತವೆ ಎಂದು ಅನುಭವದ ಮಾತು ತಿಳಿಸಿದರು.

ನೂತನ ಅಧ್ಯಕ್ಷತೆ ಕಾರ್ಯಭಾರ ವಹಿಸಿಕೊಂಡ ಚಂದ್ರಕಾಂತ ನಿರ್ಮಳೆ, ತಮಗೆ ವಹಿಸಿಕೊಟ್ಟ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಕನ್ನಡ ಕೆಲಸ ಕೇವಲ ಪರಿಷತ್ತಿಗೆ ಮಾತ್ರ ಸೀಮಿತವಾಗಿರದೆ ಎಲ್ಲ ಕನ್ನಡಿಗರು ಕೈಜೋಡಿಸಬೇಕು ಎಂದು ತಿಳಿಸಿದರು.

ಶಿವಕುಮಾರ ಬೆಲ್ದಾಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೀದರ್ ತಾಲ್ಲೂಕು ಕಸಾಪ ಅಧ್ಯಕ್ಷ ಉಮಾಕಾಂತ ಮೀಸೆ, ಬಸವಣಪ್ಪ ಅಲ್ಮಾಜೆ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಧನರಾಜ ಗುಡಮೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಹಣಮಂತ ನವಾಡೆ ಸ್ವಾಗತಿಸಿದರು. ಸೂರ್ಯಕಾಂತ ಸಿರಂಜೆ ನಿರೂಪಿಸಿದರು. ಕಲ್ಲಪ್ಪ ಬಾವುಗೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.