ಗುರುವಾರ , ಮೇ 13, 2021
16 °C

ಕನ್ನಡ ಕಡ್ಡಾಯ: ಕೆಎಂಎಫ್‌ಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟವು ಕನ್ನಡವನ್ನು ಕಡ್ಡಾಯವಾಗಿ ಬಳಸಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರು ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.



ಒಕ್ಕೂಟದಿಂದ ಉತ್ಪಾದಿಸುತ್ತಿರುವ ಉತ್ಪನ್ನಗಳ ಹೆಸರು, ಇತರೆ  ವಿವರಗಳನ್ನು ಇಂಗ್ಲಿಷ್‌ನಲ್ಲಿ ಮುದ್ರಿಸಲಾಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ' ಚಂದ್ರು ದೂರಿದ್ದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯಲ್ಲಿ ಕನ್ನಡ ಬಳಸಲು ತೆಗೆದುಕೊಂಡ ಕ್ರಮದ ಬಗ್ಗೆ ವರದಿ ನೀಡಲು ಸಚಿವರು ಆದೇಶಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.