ಗುರುವಾರ , ಮೇ 19, 2022
24 °C

ಕನ್ನಡ ತಂತ್ರಾಂಶ ಅಭಿವೃದ್ಧಿ ಯೋಜನೆ ಚಾಲನೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಹಲವಾರು ವರ್ಷಗಳಿಂದ ನಿರೀಕ್ಷಿಸುತ್ತಿರುವ ಅತ್ಯಾಧುನಿಕ ’ಯುನಿಕೋಡ್’ ಕನ್ನಡ ತಂತ್ರಾಂಶ ಅಭಿವೃದ್ಧಿ ಯೋಜನೆಗೆ ಪ್ರಸ್ತುತದ ವಿಶ್ವ ಕನ್ನಡ ಸಮ್ಮೇಳದಲ್ಲಿ ಚಾಲನೆ ಸಿಗುವ ಸಾಧ್ಯತೆ ಇದೆ.ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ಅವರು ಐತಿಹಾಸಿಕ ವಿಶ್ವ ಕನ್ನಡ ಸಮ್ಮೇಳನ ಉದ್ಘಾಟಿಸಲಿದ್ದು, ಆ ಸಂದರ್ಭದಲ್ಲಿ ಕನ್ನಡ ಭಾಷಾಭಿವೃದ್ಧಿಗೆ ವಿಶೇಷ ಕೊಡುಗೆಯಾಗಿ ಅದನ್ನು ಪ್ರಕಟಿಸುವ ಸಾಧ್ಯತೆ ಹೆಚ್ಚಾಗಿದೆ.ನಾರಾಯಣಮೂರ್ತಿ ಅವರಿಂದ ಸಮ್ಮೇಳನದ ಉದ್ಘಾಟನೆ ಕುರಿತಂತೆ ಹುಟ್ಟಿಕೊಂಡಿರುವ ವಿವಾದಕ್ಕೆಲ್ಲ ಈ ಯೋಜನೆ ಉತ್ತರ ನೀಡಬಲ್ಲದು. ಅಂತಹ ಯೋಜನೆಯ ಕುರಿತಂತೆ ಉನ್ನತ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಉನ್ನತ ಅಧಿಕಾರಿಯೊಬ್ಬರು ಮಂಗಳವಾರ  ’ಪ್ರಜಾವಾಣಿ’ಗೆ ತಿಳಿಸಿದರು.ಪ್ರಸ್ತುತ ಲಭ್ಯವಿರುವ ’ನುಡಿ’ ಕನ್ನಡ ತಂತ್ರಾಂಶ ಎಲ್ಲ ಕಂಪ್ಯೂಟರ್‌ಗಳಲ್ಲಿ ಓದಲು ಬರುವುದಿಲ್ಲ. ವಿಶ್ವದಾದ್ಯಂತ ಎಲ್ಲ ಕಂಪ್ಯೂಟರ್‌ಗಳಲ್ಲಿ ಸುಲಭವಾಗಿ ಓದಬಹುದಾದ ಯೂನಿಕೋಡ್ ಕನ್ನಡ ತಂತ್ರಾಂಶವನ್ನು ಅಭಿವೃದ್ಧಿ ಪಡಿಸುವ ಸಾಮರ್ಥ್ಯವನ್ನು ಇನ್ಫೋಸಿಸ್ ಸಂಸ್ಥೆ ಹೊಂದಿದೆ. ಜತೆಗೆ ಬೆಳಗಾವಿಯಲ್ಲಿ ಇನ್ಫೋಸಿಸ್ ಶಾಖೆಯ ಆರಂಭ ಮೊದಲಾದ ಯೋಜನೆಗಳನ್ನು ಉದ್ಘಾಟನಾ ಸಮಾರಂಭದಂದು ನಾರಾಯಣಮೂರ್ತಿಗಳು ಪ್ರಕಟಿಸುವ ಸಾಧ್ಯತೆಗಳು ದಟ್ಟವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.