ಸೋಮವಾರ, ಆಗಸ್ಟ್ 26, 2019
22 °C

ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಒತ್ತಾಯ

Published:
Updated:

ಕುಶಾಲನಗರ:  ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿ ಮೂರು ತಿಂಗಳು ಕಳೆದರೂ ಪಟ್ಟಣದಲ್ಲಿ ಈ ಆದೇಶ ಪಾಲನೆಯಾಗಿಲ್ಲ. ಈ ಆದೇಶವನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಾವಲು ಪಡೆ ಕಾರ್ಯಕರ್ತರು ಸೋಮವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿಯೂಸ್ ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.ಕಾವಲು ಪಡೆ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಕೃಷ್ಣ ನೇತೃತ್ವದಲ್ಲಿ ಕಾರ್ಯಕರ್ತರು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಆದೇಶವನ್ನು ಮುಖ್ಯಾಧಿಕಾರಿ ಅನುಷ್ಠಾನಗೊಳಿಸಿ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವಂತೆ ವ್ಯಾಪಾರಸ್ಥರಿಗೆ ಸೂಚಿಸಲು ಒತ್ತಾಯಿಸಿದರು.

ಮುಖ್ಯಾಧಿಕಾರಿ ಡಿಸೋಜಾ ಮಾತನಾಡಿ, ಕನ್ನಡ ಕಡ್ಡಾಯಕ್ಕಾಗಿ ಹಳೆಯ ಪರವಾನಗಿದಾರರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಹೊಸದ್ಕಕೆ ಷರತ್ತುಗಳನ್ನು ವಿಧಿಸಿ ಪರವಾನಗಿ ನೀಡಲಾಗುತ್ತಿದೆ ಎಂದರು.ಕಾವಲು ಪಡೆ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಕೃಷ್ಣ ಮಾತನಾಡಿ ಮಡಿಕೇರಿ ಪಟ್ಟಣದ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ನಗರ ಸಭಾ ಆಯುಕ್ತರು ಕ್ರಮ ಕೈಗೊಂಡಿದ್ದಾರೆ. ಹಾಗೆಯೇ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪಟ್ಟಣದ ಅಂಗಡಿ ಮಳಿಗೆ, ಹೋಟೆಲ್ ಮುಂತಾದವುಗಳಲ್ಲಿ ಕನ್ನಡ ನಾಮಫಲಕ ಬಳಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

  ಎಚ್.ಎಚ್. ಕುಮಾರ್, ನಾಗೇಶ್, ಕೇಶವ, ಕೆ.ಎನ್. ಜ್ವಾಲಿನ್ ಇದ್ದರು.

Post Comments (+)