ಶುಕ್ರವಾರ, ಏಪ್ರಿಲ್ 16, 2021
20 °C

ಕನ್ನಡ ನಿತ್ಯೋತ್ಸವವಾಗಲಿ: ಸಿಪಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯೋತ್ಸವದ ಆಚರಣೆ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ಕನ್ನಡದ ಉತ್ಸವ ನಿತ್ಯೋತ್ಸವ ಆಗಬೇಕು. ತಾಂತ್ರಿಕ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲೂ ಕನ್ನಡ ವಿಜೃಂಭಿಸಬೇಕು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಹೇಳಿದರು.ಆಚಾರ್ಯ ವಿದ್ಯಾಸಂಸ್ಥೆ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಕನ್ನಡ ಅಪಾಯದಲ್ಲಿದೆ. ಅದನ್ನು ತಪ್ಪಿಸಲು ನಾವು ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು.ಇಂದಿನ ಯುವ ಸಮುದಾಯದಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗುತ್ತಿದೆ. ಭಾಷೆಯಾಗಿ ಇಂಗ್ಲಿಷ್ ಬೇಕು ಆದರೆ ಮಾಧ್ಯಮವಾಗಿ ಬೇಡ. ಯಾವ ಭಾಷೆಯನ್ನೂ ದ್ವೇಷಿಸದೇ ಎಲ್ಲವನ್ನೂ ಪ್ರೀತಿಸಬೇಕು ಎಂದು ಸಲಹೆ ನೀಡಿದರು.ಅಂಕಣಕಾರ ಪ್ರೊ.ಗುರುರಾಜ್ ಎಸ್. ಮಾತನಾಡಿ, ಕುವೆಂಪು ಅವರು ವಿಶ್ವಮಾನವ ಸಂದೇಶವನ್ನು ಜಗತ್ತಿಗೇ ಸಾರಿದರು. ಕನ್ನಡ ಡಿಂಡಿಮವನ್ನು ಸಾಹಿತ್ಯದ ಮೂಲಕ ಪ್ರಚುರಪಡಿಸಿದ ಹೆಗ್ಗಳಿಕೆ ಅವರದು. ಅವರ ಸಂದೇಶವನ್ನು ನಾವಿಂದು ಪರಿಪಾಲಿಸುವ ಅಗತ್ಯವಿದೆ ಎಂದರು.ಹಾಸ್ಯ ಬರಹಗಾರ ಎಂ.ಎಸ್.ನರಸಿಂಹಮೂರ್ತಿ ಹಾಸ್ಯಚಟಾಕಿಗಳ ಮೂಲಕ ನೆರೆದವರನ್ನು ರಂಜಿಸಿದರು. ಜೆ.ಎಂ.ಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ಬಿ.ಎಂ.ರೆಡ್ಡಿ ಉಪಸ್ಥಿತರಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.