ಶನಿವಾರ, ಮೇ 8, 2021
26 °C

ಕನ್ನಡ ಭವನದಲ್ಲಿ ಪುಸ್ತಕ ಮೇಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ವ ಶಿಕ್ಷಣ ಅಭಿಯಾನ ಯೋಜನೆ ಅಡಿ ಜಿಲ್ಲೆಯ ಪ್ರಾಥಮಿಕ ಶಾಲೆಗಳಿಗೆ 2011-12ನೇ ಸಾಲಿನಲ್ಲಿ ಶಾಲಾ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಪುಸ್ತಕ ಮೇಳ ಆಯೋಜಿಸಲಾಗಿದೆ.ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಿವಪ್ರಭು ಪಾಟೀಲ ಪುಸ್ತಕ ಮೇಳ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ಜಿ. ವಿಜಯಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಸ್. ಪರಮೇಶ, ಸರ್ವ ಶಿಕ್ಷಣ ಅಭಿಯಾನ ಯೋಜನಾ ಉಪಸಮನ್ವಯಾಧಿಕಾರಿ ಮದರ್‌ಖಾನ್, ಶಿಕ್ಷಣ ಇಲಾಖೆಯ ದತ್ತಪ್ಪ, ಶರಣಪ್ಪ ಎಚ್.ಎಸ್. ದೇಶಮುಖ, ಚಂದ್ರಶೇಖರ ಪಾಟೀಲ, ಸಿದ್ಧವೀರಯ್ಯ ರುದ್ನೂರ ಇತರರು ಇದ್ದರು.ಜಿಲ್ಲೆಯ 853 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಹಾಗೂ 368 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸುವುದಕ್ಕಾಗಿ ಒಟ್ಟು ರೂ 96 ಲಕ್ಷ ನಿಗದಿ ಪಡಿಸಲಾಗಿದ್ದು, ಹಿರಿಯ ಪ್ರಾಥಮಿಕ ಶಾಲೆಗಳಿಗೆ ರೂ. 10,000 ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳಿಗೆ ರೂ. 3,000 ನಿಗದಿ ಪಡಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.ಈ ಪುಸ್ತಕ ಮೇಳದಲ್ಲಿ ಒಟ್ಟು 40 ಮಳಿಗೆಗಳು ನೋಂದಣಿಯಾಗಿದ್ದು, ಪ್ರತಿದಿನ ಮೂರು ತಾಲ್ಲೂಕಿನ ಶಾಲೆಗಳ ಗ್ರಾಂಥಾಲಯಕ್ಕೆ ಪುಸ್ತಕ ಖರೀದಿಸಲು ಅವಕಾಶ ನೀಡಲಾಗಿದ್ದು, ಶೇ. 20 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.