ಶುಕ್ರವಾರ, ಜೂನ್ 18, 2021
24 °C

ಕನ್ನಡ ಭವನ ಬೇಗ ನಿರ್ಮಾಣವಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಮುಂಭಾಗದಲ್ಲಿ ಇತ್ತೀಚೆಗೆ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ಅನಾವರಣದ ಸಂದರ್ಭದಲ್ಲಿ ಮುಖ್ಯಮಂತ್ರಿ ಸದಾನಂದಗೌಡರು ಕಳೆದ ವರ್ಷ ನಡೆದ `ಬೆಂಗಳೂರು ಸಾಹಿತ್ಯ ಸಮ್ಮೇಳನ~ದ ನೆನಪಿನಲ್ಲಿ ಹನುಮಂತ ನಗರದಲ್ಲಿ ಬಿಡಿಎ ವಶದಲ್ಲಿರುವ ಸ್ಥಳದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದನ್ನು ಪತ್ರಿಕೆಗಳಲ್ಲಿ ಓದಿ ಸಂತೋಷವಾಯಿತು.ಬೆಂಗಳೂರು ಬೃಹದಾಕಾರವಾಗಿ ಬೆಳೆದಿದೆ, ಬೆಳೆಯುತ್ತಲೇ ಇದೆ. ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಅದರ ಕೇಂದ್ರ ಕಚೇರಿ ಸಾಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಭವನದ ಅಗತ್ಯವಿದೆ.ಸದಾನಂದ ಗೌಡರ ಅಧಿಕಾರಾವಧಿಯಲ್ಲೇ ಕನ್ನಡ ಭವನದ ನಿರ್ಮಾಣ ಕಾಮಗಾರಿ ಆರಂಭವಾಗಬೇಕು. ಅದಕ್ಕೆ ಅಗತ್ಯವಾಗ ಹಣಕಾಸನ್ನು ಅವರು ಬಜೆಟ್‌ನಲ್ಲಿ ಒದಗಿಸಬೇಕು. ಅವರ ಅಧಿಕಾರಾವಧಿಯಲ್ಲೇ ಭವನದ ಉದ್ಘಾಟನೆ ಆಗಬೇಕು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.