ಮಂಗಳವಾರ, ಮೇ 11, 2021
20 °C

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮೇಲೆ ಲೋಕಾಯುಕ್ತ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನುದಾನ ದುರ್ಬಳಕೆ, ಚಿನ್ನದ ಪದಕಗಳ ಕಣ್ಮರೆ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆ ಆರಂಭಿಸಿದ್ದಾರೆ.ಹಿರಿಯ ಕಲಾವಿದರುಗಳಿಗೆ ಮಾಸಾಶನ ವಿತರಣೆ, ಕಲಾವಿದರು ಮತ್ತು ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಮಾಹಿತಿ ಲೋಕಾಯುಕ್ತ ಪೊಲೀಸರಿಗೆ ಲಭ್ಯವಾಗಿತ್ತು.ರಾಜ್ಯೋತ್ಸವ ಪ್ರಶಸ್ತಿ ಜೊತೆ ನೀಡುವ ಚಿನ್ನದ ಪದಕಗಳೂ ನಿರ್ದೇಶಕರ ಕಚೇರಿಯಿಂದಲೇ ನಾಪತ್ತೆಯಾಗಿದ್ದವು. ಈ ಕುರಿತು ದೊರೆತ ಖಚಿತ ಮಾಹಿತಿ ಆಧರಿಸಿ ಮೊಕದ್ದಮೆ ದಾಖಲಿಸಿದ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು, ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಮೇಲೆ ದಾಳಿ ಮಾಡಿ ಶೋಧ ನಡೆಸಿದರು.ಅನುದಾನ ಮತ್ತು ಮಾಸಾಶನ ಬಿಡುಗಡೆಯಲ್ಲಿ ಚೆಕ್ ಮೂಲಕ ವ್ಯವಹಾರ ನಡೆಯುತ್ತಿಲ್ಲ ಎಂಬುದು ಪರಿಶೀಲನೆ ವೇಳೆ ಪತ್ತೆಯಾಗಿದೆ. ನಗದು ವಿತರಣೆ ಮಾಡುತ್ತಿರುವುದು ಅನುಮಾನಕ್ಕೆ ಎಡೆಮಾಡಿದೆ.ಪ್ರದಾನವಾಗದ ಪ್ರಶಸ್ತಿ!

ಕೆಲವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಆಗಿಲ್ಲ. ಆದರೆ, ಅವರಿಗೆ ನೀಡಬೇಕಿದ್ದ ಚಿನ್ನದ ಪದಕಗಳು ಕಣ್ಮರೆಯಾಗಿವೆ. ಅವುಗಳ ಪತ್ತೆಗೆ ಯಾವುದೇ ಪ್ರಯತ್ನವೂ ನಡೆದಿಲ್ಲ ಎಂಬುದನ್ನೂ ತನಿಖಾ ತಂಡ ಬಯಲಿಗೆ ತಂದಿದೆ.`ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಶೋಧ ನಡೆಸಿದ ಲೋಕಾಯುಕ್ತ ಪೊಲೀಸರು ಕೆಲವು ಕಡತಗಳನ್ನು ವಶಕ್ಕೆ ಪಡೆದಿದ್ದಾರೆ. ಕಚೇರಿಯ ಅಧಿಕಾರಿಗಳ ವಿರುದ್ಧದ ಆರೋಪಗಳ ಕುರಿತು ತನಿಖೆ ಮುಂದುವರಿಯಲಿದೆ' ಎಂದು ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಚ್.ಎನ್. ಸತ್ಯನಾರಾಯಣ ರಾವ್ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.