ಭಾನುವಾರ, ಮೇ 16, 2021
28 °C

ಕನ್ನಡ ಶಾಲೆಗಳ ಕತ್ತು ಹಿಸುಕುವ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆನೇಕಲ್: ಮಕ್ಕಳ ಸಂಖ್ಯೆ ಕಡಿಮೆಯಿರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಬೇರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ನೆಪದಲ್ಲಿ ಕನ್ನಡದ ಶಾಲೆಗಳನ್ನು ಕತ್ತು ಹಿಸುಕುವ ಕೆಲಸ ಮಾಡಲಾಗುತ್ತಿದೆ ಎಂದು ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ದೇವ ಅತಂಕ ವ್ಯಕ್ತಪಡಿಸಿದರು.ತಾಲ್ಲೂಕಿನ ಇಚ್ಛಂಗೂರಿನಲ್ಲಿ ಕನ್ನಡ ಜಾಗೃತಿ ವೇದಿಕೆಯ ಗ್ರಾಮ ಶಾಖೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಕನ್ನಡ ಮಾಧ್ಯಮ ಶಾಲೆಗಳು ಹಾಗೂ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಮೀಸಲಾತಿ ನೀಡುವ ತೀರ್ಮಾನ ತೆಗೆದುಕೊಳ್ಳುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲ ಸರ್ಕಾರಗಳು ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿವೆ. ಕಾವೇರಿ ಜಲ ವಿವಾದ, ಕೃಷ್ಣಾ ನದಿ ನೀರು ಹಂಚಿಕೆ, ಗಡಿ ವಿವಾದಗಳನ್ನು ಬಗೆಹರಿಸಿಕೊಳ್ಳುವಲ್ಲಿ ಕಾಳಜಿ ತೋರುತ್ತಿಲ್ಲ ಎಂದು ಅವರು ಟೀಕಿಸಿದರು. ಆಡಳಿತದ ಪ್ರತಿ ಹಂತದಲ್ಲೂ ಕನ್ನಡವನ್ನು ಕಡ್ಡಾಯ ಮಾಡಬೇಕು. ಕನ್ನಡದ ಹೋರಾಟಗಾರರು ಮತ್ತು ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಅನಗತ್ಯ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು  ಎಂದು ಅವರು ಒತ್ತಾಯಿಸಿದರು.ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ರಾಮಚಂದ್ರ ಮಾತನಾಡಿ, ತಾಲ್ಲೂಕಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು. ಭೂಮಿ ಕಳೆದುಕೊಂಡ ರೈತರ ಕುಟುಂಬಗಳಿಗೆ ಉದ್ಯೋಗ ನೀಡಬೇಕು ಎಂದರು.ಪ್ರಜಾ ವಿಮೋಚನಾ ಚಳವಳಿ ರಾಜ್ಯಘಟಕದ ಅಧ್ಯಕ್ಷ ಪಟಾಪಟ್ ನಾಗರಾಜ್ ಮಾತನಾಡಿ, ನೆರೆಹೊರೆ ರಾಜ್ಯಗಳು ನೆಲ, ಜಲ, ಭಾಷೆ ವಿಷಯಗಳಿಗೆ ಸಂಬಂಧಿಸಿದಂತೆ ನಿತ್ಯ ತಗಾದೆ ತೆಗೆಯುತ್ತಿವೆ ಇಂತಹ ಸಂದರ್ಭದಲ್ಲಿ ರಾಜಕೀಯ ಮುಖಂಡರು ಪಕ್ಷ ಬೇಧ ಮರೆತು ಒಗ್ಗಟ್ಟು ಕಾಯ್ದುಕೊಂಡು ೀರಾಟ ನಡೆಸಬೇಕು ಎಂದು ಅವರು ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ತಾ.ನಂ.ಕುಮಾರಸ್ವಾಮಿ,  ಕರ್ನಾಟಕ ಜಾಗೃತಿ ವೇದಿಕೆಯ ಮುಖಂಡರಾದ ಮೆಳೆನಲ್ಲಸಂದ್ರ ಅಶ್ವತ್ಥ್, ಬಿ.ಕೆ.ಬಷೀರ್, ಕೆ.ಪಿ.ನಾರಾಯಣ ಸ್ವಾಮಿ, ಅಂಬೇಡ್ಕರ್ ಯುವ ಸೇನೆ ಅಧ್ಯಕ್ಷ  ಮುನಿರಾಜು, ಶಾಖೆಯ ಅಧ್ಯಕ್ಷ ಎಂ.ಕೃಷ್ಣ, ಉಪಾಧ್ಯಕ್ಷ ಮುನಿರಾಜು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.