ಕನ್ನಡ ಸಂಘಟನೆಗಳ ಕಾರ್ಯಕ್ಕೆ ಶ್ಲಾಘನೆ

7

ಕನ್ನಡ ಸಂಘಟನೆಗಳ ಕಾರ್ಯಕ್ಕೆ ಶ್ಲಾಘನೆ

Published:
Updated:

ಬೆಂಗಳೂರು:  `ನೆಲ, ಜಲ, ಭಾಷೆಗಾಗಿ ನಿರಂತರ ಹೋರಾಟ ಮಾಡಬೇಕಿದೆ. ಇವುಗಳನ್ನು ಹೋರಾಟದ ಮೂಲಕವೇ ಪಡೆದುಕೊಳ್ಳುವ ಶೋಚನೀಯ ಸ್ಥಿತಿ ನಮ್ಮದು. ಈ ನಿಟ್ಟಿನಲ್ಲಿ ಕನ್ನಡಪರ ಸಂಘಟನೆಗಳು ಮೂಡಿಸುತ್ತಿರುವ ಜಾಗೃತಿ ಶ್ಲಾಘನೀಯ~ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಆರ್.ಕೆ.ನಲ್ಲೂರು ಪ್ರಸಾದ್ ಅಭಿಪ್ರಾಯಪಟ್ಟರು. ಕನ್ನಡ ಸಂಘರ್ಷ ಸಮಿತಿಯಲ್ಲಿ 26 ವರ್ಷಗಳ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ರಾಮಣ್ಣ ಕೋಡಿಹೊಸಹಳ್ಳಿ ಅವರಿಗೆ ನಗರದಲ್ಲಿ ಗುರುವಾರ ಆಯೋಜಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ನೂತನ ಅಧ್ಯಕ್ಷ ಡಾ.ಕೋ.ವೆಂ.ರಾಮಕೃಷ್ಣೇಗೌಡ ಅವರಿಗೆ ರಾಮಣ್ಣ ಕೋಡಿಹೊಸಹಳ್ಳಿ ಅಧಿಕಾರ ಹಸ್ತಾಂತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry