ಭಾನುವಾರ, ಆಗಸ್ಟ್ 9, 2020
21 °C

ಕನ್ನಡ ಸಂಸ್ಕೃತಿ ಪೋಷಣೆಗೆ ಆರ್ಯವೈಶ್ಯರ ಕೊಡುಗೆ ಅಪಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನ್ನಡ ಸಂಸ್ಕೃತಿ ಪೋಷಣೆಗೆ ಆರ್ಯವೈಶ್ಯರ ಕೊಡುಗೆ ಅಪಾರ

ಬೆಂಗಳೂರು: `ಆರ್ಯವೈಶ್ಯರು ಮಾನವತಾವಾದಿಗಳು. ಅವರಲ್ಲಿ ಕಪಟ, ಮೋಸ ಕಂಡು ಬರುವುದಿಲ್ಲ. ಅವರು ರಾಜ್ಯದ ಕೀರ್ತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಡಿದ್ದಾರೆ. ಕನ್ನಡ ಭಾಷೆ ಹಾಗೂ ಸಂಸ್ಕೃತಿ ಉಳಿಸುವಲ್ಲಿ ಅವರ ಪಾತ್ರ ಮಹತ್ತರವಾದುದು~ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಬಣ್ಣಿಸಿದರು.ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಭಾನುವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿ, `ನಿರ್ಲಕ್ಷ್ಯ ಒಳಗಾಗಿರುವ ಆರ್ಯವೈಶ್ಯ ಸಮುದಾಯದ ಸಾಹಿತಿಗಳನ್ನು ಕಸಾಪ ವತಿಯಿಂದ ಗುರುತಿಸಿ ಗೌರವಿಸಲಾಗುವುದು~ ಎಂದರು. ಹಿರಿಯ ಪತ್ರಕರ್ತ ರಾಜಾ ಶೈಲೇಶಚಂದ್ರ ಗುಪ್ತ ಮಾತನಾಡಿ, `ಆರ್ಯವೈಶ್ಯರು ಪ್ರಾಮಾಣಿಕರು. ಅವರಿಂದ ಸಾಮಾಜಿಕ ವ್ಯವಸ್ಥೆಗೆ ಯಾವುದೇ ಹಾನಿ ಆಗಿಲ್ಲ~ ಎಂದರು. ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಬಿ.ವಿಜಯಕುಮಾರ್, ಟಿ.ಎ.ಪಿ.ಸಮೂಹ ಸಂಸ್ಥೆಗಳ ಅಧ್ಯಕ್ಷ ಟಿ.ಎ.ಪಿ.ನಾಗರಾಜ್, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್   ಅಧ್ಯಕ್ಷ ಟಿ.ತಿಮ್ಮೇಶ್, ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರಾಮಲಿಂಗ ರೆಡ್ಡಿ, ರಾಜ್ಯ ಲಲಿತಕಲಾ ಅಕಾಡೆಮಿಯ ಸದಸ್ಯ ಕೃಷ್ಣ ರಾಯಚೂರು ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.