ಬುಧವಾರ, ಏಪ್ರಿಲ್ 21, 2021
30 °C

ಕನ್ನಡ ಸಾಹಿತ್ಯ ಭವನ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಂಕೋಲಾ: ‘ಕನ್ನಡ ಭಾಷೆಯ ಅಭಿವೃದ್ಧಿಗೆ ಕನ್ನಡಿಗರು ಶ್ರಮಿಸಬೇಕು,  ಇಂಗ್ಲಿಷ್ ವ್ಯಾಮೋಹದಲ್ಲಿ  ನೆಲದ ಭಾಷೆಯನ್ನೇ ಮರೆಯಬಾರದು. ಭಾಷಾ ಬೆಳವಣಿಗೆಯಲ್ಲಿ ನಾಗರಿಕರು, ವಿದ್ಯಾರ್ಥಿಗಳು ಶಿಕ್ಷಕರು, ಪಾಲಕರ ಪಾತ್ರ ಬಹು ಮುಖ್ಯ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.ಅವರು ಸೋಮವಾರ ಅಂಕೋಲಾದಲ್ಲಿ ಕನ್ನಡ ಸಾಹಿತ್ಯ ಭವನದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ವತಃ ಕನ್ನಡ ಶಾಲೆಯ ಶಿಕ್ಷಕರು ಮತ್ತು ಇತರ ಪಾಲಕರು ತಮ್ಮ ಮಕ್ಕಳ ಮೇಲೆ ಇಂಗ್ಲಿಷ್ ಮಾಧ್ಯಮದ ಒತ್ತಡವನ್ನು ಹಾಕಬಾರದು. ಇಂಗ್ಲಿಷ್ ಅನ್ನು ಒಂದು ಭಾಷೆಯಾಗಿ ಕಲಿಯಬೇಕು. ಮಾತೃಭಾಷೆ ವಿದ್ಯಾಭ್ಯಾಸದಿಂದ ಮಕ್ಕಳಲ್ಲಿ ಸರ್ವಾಂಗೀಣ ವಿಕಾಸಕ್ಕೆ ಅನುಕೂಲವಾಗುತ್ತದೆ ಎಂದರು.ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ, ಸಾಹಿತಿ ವಿಷ್ಣು ನಾಯ್ಕ ಉಪಸ್ಥಿತರಿದ್ದರು. ಜಿ.ಪಂ. ಉಪಾಧ್ಯಕ್ಷ ಉದಯ ಡಿ. ನಾಯ್ಕ, ಸದಸ್ಯರಾದ ವಿನೋದ ಬಿ. ನಾಯಕ, ಸರಸ್ವತಿ ಗೌಡ, ತಾ.ಪಂ. ಅಧ್ಯಕ್ಷ ಜಗನ್ನಾಥ ಗೌಡ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾರ್ವೇಕರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಜಿ.ಆರ್. ನಾಯಕ ಪ್ರಾರ್ಥಿಸಿದರು. ತಹಸೀಲ್ದಾರ ಡಾ. ಉದಯಕುಮಾರ ಶೆಟ್ಟಿ ಸ್ವಾಗತಿಸಿದರು. ಕರ್ನಾಟಕ ಸಂಘದ ಕಾರ್ಯದರ್ಶಿ ಜಗದೀಶ ಜಿ.ನಾಯಕ ನಿರ್ವಹಿಸಿದರು.  ಉಪಾಧ್ಯಕ್ಷ ಡಾ.ಶಿವಾನಂದ ನಾಯಕ ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.