ಚಿತ್ರದುರ್ಗ: ನಗರದಲ್ಲಿ ಇದೇ 24 ಮತ್ತು 25ರಂದು ನಡೆಯಲಿರುವ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಮಲ್ಲಿಕಾರ್ಜುನಯ್ಯ ಅವರು, ಸಮ್ಮೇಳನಕ್ಕೆ ಒಂದು ಸಾವಿರ ಸಾಹಿತ್ಯ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದೆ. ಬರುವವರೆಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ತಾವೇ ಆಸಕ್ತಿವಹಿಸಿ ಸಮ್ಮೇಳನಕ್ಕೆ ಆಗಮಿಸುವ ಸದಸ್ಯರಿಗೆ ಊಟದ ವ್ಯವಸ್ಥೆ ಮಾಡಿಸಿದ್ದಾರೆ ಎಂದು ತಿಳಿಸಿದರು.

`ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಹಲವು ಹೆಸರುಗಳು ಕೇಳಿಬಂತು. ಕೊನೆಗೆ ಜಿಲ್ಲೆಯ ಹಿರಿಯ ಸಾಹಿತಿಗಳ ಸಲಹೆಯಂತೆ ಖ್ಯಾತ ಕಾದಂಬರಿಕಾರ ಬಿ.ಎಲ್.ವೇಣು ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಪರಿಷತ್ತಿನ ಕಾರ್ಯಕಾರಿಣಿ ಸದಸ್ಯರು ಈ ಆಯ್ಕೆಯನ್ನು ಸರ್ವಾನುಮತದಿಂದ ಅನುಮೋದಿಸಿದ್ದಾರೆ' ಎಂದರು.

ಸಮ್ಮೇಳನಾಧ್ಯಕ್ಷರ ಮೆರವಣಿಗೆ: 24ರಂದು ಬೆಳಿಗ್ಗೆ ರಾಜವೀರ ಮದಕರಿ ನಾಯಕನ ವೃತ್ತದಿಂದ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ ಆರಂಭವಾಗುತ್ತದೆ. ಇಲ್ಲಿಂದ ದೊಡ್ಡಪೇಟೆ, ಚಿಕ್ಕಪೇಟೆ, ಮಹಾತ್ಮಗಾಂಧಿ ವೃತ್ತದ ಮೂಲಕ ಸಾಗುವ ಮೆರವಣಿಗೆ ಸಮ್ಮೇಳನ ನಡೆಯುವ ಎಸ್ಜೆಎಂ ಸಭಾಂಗಣ ತಲುಪುತ್ತದೆ ಎಂದು ಅವರು ವಿವರಿಸಿದರು.

ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಎಲ್ಲ ಕನ್ನಡ ಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ಸಾಹಿತ್ಯ ಅಭಿಮಾನಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಎಲ್ಲ ಸಂಘಟನೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆದಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಅವರು ಒಪ್ಪಿಗೆ ಸೂಚಿಸಿರುವುದಾಗಿ ಅಧ್ಯಕ್ಷರು ತಿಳಿಸಿದರು.

ಸಮ್ಮೇಳನ ಉದ್ಘಾಟನೆ: ಶಿವಮೂರ್ತಿ ಮುರುಘಾಶರಣ ಸಾನ್ನಿಧ್ಯದಲ್ಲಿ ಆರಂಭವಾಗುವ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ಅವರು ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಮಾತನಾಡಲಿದ್ದಾರೆ. ಪ್ರಥಮ ದಿನದ ಕಾರ್ಯಕ್ರಮದಲ್ಲಿ ಐದು ಪುಸ್ತಕಗಳು ಬಿಡುಗಡೆಯಾಗಲಿವೆ ಎಂದು ಹೇಳಿದರು.

ಐದು ವಿವಿಧ ಗೋಷ್ಠಿಗಳು: ಎರಡು ದಿನಗಳ ಸಮ್ಮೇಳನದಲ್ಲಿ ಮಹಿಳಾ ಹಿತರಕ್ಷಣೆ, ಬಿ.ಎಲ್.ವೇಣುರವರ ಸಾಹಿತ್ಯ ಕೃತಿಗಳು, ಕವಿ ಗೋಷ್ಠಿ, ವಿಶೇಷ ಉಪನ್ಯಾಸ ಮತ್ತು ಮಾಧ್ಯಮಗಳು ಮ್ತು ಜನತೆಯತ್ತ ಶಿಕ್ಷಣ ಎಂಬ ವಿಷಯಾಧಾರಿತ ಐದು ಗೋಷ್ಠಿಗಳಿವೆ.
ಸಮ್ಮೇಳನದ ಕೊನೆಯಲ್ಲಿ ಅಧಿವೇಶನದ ನಿರ್ಣಯವನ್ನು ಮಂಡಿಸಲಾಗುತ್ತದೆ. ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ. ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದೆ. ಸಿರಿಗೆರೆಯ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು.

`ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಹನ್ನೆರಡು ಮಂದಿ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮವಿದೆ. ಈ ಎಲ್ಲ ಸಾಧಕರ ಆಯ್ಕೆಯ ಜವಾಬ್ದಾರಿಯನ್ನು ಆಯಾ ತಾಲ್ಲೂಕಿನ ಸಾಹಿತ್ಯ ಪರಿಷತ್ ಘಟಕಕ್ಕೆ ವಹಿಸಲಾಗಿತ್ತು. ಆ ಪ್ರಕಾರ ಆಯ್ಕೆ ಮಾಡಲಾಗಿದೆ' ಎಂದು ತಿಳಿಸಿದರು.

ಶಿಕ್ಷಕರಿಗೆ ಅನ್ಯಕಾರ್ಯ ನಿಮಿತ್ತ ರಜೆ (ಒಒಡಿ): ಸಾಹಿತ್ಯ ಸಮ್ಮೇಳದಲ್ಲಿ ಭಾಗವಹಿಸುವ ಶಿಕ್ಷಕರಿಗೆ `ಅನ್ಯ ಕಾರ್ಯ ನಿಮಿತ್ತ ರಜೆ' ನೀಡುವುದಾಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣಾಧಿಕಾರಿಗಳು ಹೇಳಿದ್ದಾರೆ. ರಜೆ ಪಡೆದು ಸಮ್ಮೇಳನಕ್ಕೆ ಬರುವ ಶಿಕ್ಷಕರು ಗೋಷ್ಠಿಯಲ್ಲಿ ಭಾಗವಹಿಸಬೇಕು ಎಂದು ಅಧ್ಯಕ್ಷರು ಮನವಿ ಮಾಡಿದರು.

ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಹುರುಳಿ ಬಸವರಾಜು, ಜಿ.ಡಿ.ಚಿತ್ತಣ್ಣ, ಕೋಶಾಧ್ಯಕ್ಷ ಬಿ.ವಿ.ವಿಶ್ವನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.