ಕನ್ನಡ ಹಾಸ್ಯ ನಟ, ರಂಗಭೂಮಿ ಕಲಾವಿದ ಕರಿಬಸವಯ್ಯ ನಿಧನ

7

ಕನ್ನಡ ಹಾಸ್ಯ ನಟ, ರಂಗಭೂಮಿ ಕಲಾವಿದ ಕರಿಬಸವಯ್ಯ ನಿಧನ

Published:
Updated:

ಬೆಂಗಳೂರು: ಕನ್ನಡ ಚಲನ ಚಿತ್ರ ಹಾಸ್ಯ ನಟ, ರಂಗಭೂಮಿ ಕಲಾವಿದ ಕರಿಬಸವಯ್ಯ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅಪಘಾತಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಖಾಸಗಿ  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ನಿಧನರಾದರು.

ಜನವರಿ 31ರ ಮಂಗಳವಾರ ಬೆಳಗಿನ ಜಾವ ಕನಕಪುರದಿಂದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಹಿಂತಿರುಗುವಾಗ ಕರಿಬಸವಯ್ಯ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾರನ್ನು ಅವರೇ  ಸ್ವತಃ ಚಾಲನೆ ಮಾಡುತ್ತಿದ್ದರು. ರಸ್ತೆಯಲ್ಲಿನ ಹಳ್ಳ ತಪ್ಪಿಸಲು ಹೋಗಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕಾರು ಉರುಳಿ ಬಿದ್ದಿತ್ತು ಎಂದು ಹೇಳಲಾಗಿದೆ.

 

~ಉಂಡೂ ಹೋದ ಕೊಂಡೂ ಹೋದ~ ಚಿತ್ರದ ಮೂಲಕ ಬಣ್ಣ ಹಚ್ಚಿದ ಇವರು ಕೊಟ್ರೇಶಿ ಕನಸು, ಜನುಮದ ಜೋಡಿ, ಮುಂಗಾರಿನ ಮಿಂಚು, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಮತ್ತಿತರ ಚಿತ್ರಗಳು ಬಿಡುಗಡೆ ಆಗಬೇಕಾಗಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry