ಮಂಗಳವಾರ, ಮೇ 24, 2022
24 °C

ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ನರ್ಸಿಂಗ್ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ನರ್ಸಿಂಗ್ ಕಾಲೇಜುಗಳ ಮಾನ್ಯತೆ ರದ್ದುಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಬಾಯಿಗೆ ಕಪ್ಪುಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸಿದರು. ಕಾಲೇಜುಗಳ ವಿರುದ್ಧ ಕ್ರಮಕ್ಕಾಗಿ ಈಗಾಗಲೇ ಸಾವಿರಾರು ಜನರ ಸಹಿ ಸಂಗ್ರಹಿಸಿರುವ ಕಾರ್ಯಕರ್ತರು ಇದೀಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿ ಗಮನ ಸೆಳೆದರು.ವೈದ್ಯಕೀಯ ಶಿಕ್ಷಣ ಸಚಿವರು ನರ್ಸಿಂಗ್ ಕಾಲೇಜುಗಳ ಗೊಡ್ಡು ಬೆದರಿಕೆಗಳಿಗೆ ಕಿವಿಗೊಡದೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ರದ್ದುಪಡಿಸಲಾದ ನರ್ಸಿಂಗ್ ಪರೀಕ್ಷೆಗಳನ್ನು ಶೀಘ್ರ ಬೀದರ್‌ನಲ್ಲಿ ವ್ಯವಸ್ಥಿತವಾಗಿ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಪರಿಷತ್ತಿನ ಪ್ರಶಾಂತ ಮಲ್ಕಾಪುರೆ, ಅಂಬರೀಷ ಬಟನಾಪುರೆ, ಮುರಳಿಧರನ್, ರಮೇಶ, ಸೋಮನಾಥ ಸ್ವಾಮಿ, ಪ್ರಶಾಂತ ಪವಾರ, ಎನ್. ಜಗದೀಶ, ರಾಜು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.