ಕಪ್ಪು ಹಣ: 9ರಂದು ಸಭೆ

ಮಂಗಳವಾರ, ಜೂಲೈ 23, 2019
25 °C

ಕಪ್ಪು ಹಣ: 9ರಂದು ಸಭೆ

Published:
Updated:

ನವದೆಹಲಿ (ಪಿಟಿಐ): ದೇಶದಲ್ಲಿ ಕಪ್ಪು ಹಣದ ಹಾವಳಿಯನ್ನು ನಿಯಂತ್ರಿಸಲು ಕೇಂದ್ರ ನೇರ ತೆರಿಗೆಗಳ ಮಂಡಳಿಯ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಯು ಈ ತಿಂಗಳ 9ರಂದು ಮೊದಲ ಸಭೆ ನಡೆಸುವ ಸಾಧ್ಯತೆಗಳಿವೆ.ರಾಮ್‌ದೇವ್ ಅವರು ನಡೆಸಿದ ನಿರಶನ ಮತ್ತು ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಮಿತಿಯು ಶೀಘ್ರದಲ್ಲಿಯೇ ಸಭೆ ಸೇರಿ ಈ ಬಗ್ಗೆ ಚರ್ಚಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ನೇರ ತೆರಿಗೆಗಳ ಮಂಡಳಿಯ ಅಧ್ಯಕ್ಷ ಪ್ರಕಾಶ್‌ಚಂದ್ರ ನೇತೃತ್ವದ ಸಮಿತಿಯಲ್ಲಿ ವಿವಿಧ ತನಿಖಾ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಸದಸ್ಯರಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry