ಶುಕ್ರವಾರ, ಮೇ 14, 2021
31 °C

ಕಬಡ್ಡಿ: ದಕ್ಷಿಣ ಕನ್ನಡ ತಂಡಗಳು ಚಾಂಪಿಯನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆ ನಗರದಲ್ಲಿ ಭಾನುವಾರ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಟೂರ್ನಿಯ ಬಾಲಕರ ಹಾಗೂ ಬಾಲಕಿಯರ ವಿಭಾಗ ಎರಡರಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮಿತು. ಬಾಲಕರ ವಿಭಾಗದಲ್ಲಿ ಬೆಳಗಾವಿ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ತಂಡಗಳು ರನ್ನರ್ಸ್‌ ಅಪ್ ಪ್ರಶಸ್ತಿಯನ್ನು ಪಡೆದುಕೊಂಡವು.ಬಾಲಕರ ವಿಭಾಗದ ಫೈನಲ್‌ನಲ್ಲಿ ದಕ್ಷಿಣ ಕನ್ನಡ ತಂಡವು ಬೆಳಗಾವಿ ತಂಡವನ್ನು 48- 28ರಲ್ಲಿ ಸೋಲಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಗಿಟ್ಟಿಸಿಕೊಂಡಿತು. ಮೊದಲ ಸೆಮಿಫೈನಲ್‌ನಲ್ಲಿ ತಾಂತ್ರಿಕ ಕಾರಣದಿಂದಾಗಿ ಬೆಳಗಾವಿ ತಂಡ ಮಂಡ್ಯ ತಂಡದ ವಿರುದ್ಧ ವಾಕ್ ಓವರ್ ಪಡೆದರೆ, ಇನ್ನೊಂದು ಸೆಮಿ ಫೈನಲ್‌ನಲ್ಲಿ ದಕ್ಷಿಣ ಕನ್ನಡ ತಂಡವು ಧಾರವಾಡ ಜಿಲ್ಲೆ ತಂಡವನ್ನು ಮಣಿಸಿತು.ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ತಂಡವು ಉಡುಪಿ ತಂಡವನ್ನು 33- 05ರಲ್ಲಿ ಸೋಲಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. ಸೆಮಿಫೈನಲ್‌ನಲ್ಲಿ ಉಡುಪಿ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 14-13ರಲ್ಲಿ ಸೋಲಿಸಿದರೆ, ದಕ್ಷಿಣ ಕನ್ನಡ ತಂಡವು ಚಿಕ್ಕಬಳ್ಳಾಪುರ ತಂಡವನ್ನು 31-18ರಲ್ಲಿ ಮಣಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.