ಗುರುವಾರ , ಏಪ್ರಿಲ್ 22, 2021
28 °C

ಕಬಡ್ಡಿ- ಹೂಡಿ ಶಾಲೆ ಜಿಲ್ಲಾ ಮಟ್ಟಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಬಡ್ಡಿ- ಹೂಡಿ ಶಾಲೆ ಜಿಲ್ಲಾ ಮಟ್ಟಕ್ಕೆ

ಮಹದೇವಪುರ: ಕ್ಷೇತ್ರದ ವೈಟ್‌ಫೀಲ್ಡ್ ಸಮೀಪದ `ಓ ಫಾರಂ~ ಬಳಿಯ ಉಜ್ವಲ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಶಾಲಾ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ ವಿಭಾಗದಲ್ಲಿ ಹೂಡಿಯ ಹಿರಿಯ ಪ್ರಾಥಮಿಕ ಶಾಲಾ ತಂಡ ಪ್ರಥಮ ಸ್ಥಾನ ಗಳಿಸಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಎರಡು ವರ್ಷಗಳಿಂದ ಹೂಡಿ ಶಾಲಾ ಮಕ್ಕಳ ತಂಡ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿ ಪ್ರಥಮ ಸ್ಥಾನವನ್ನು ಗಳಿಸುತ್ತಿದೆ. ಅದರಲ್ಲೂ ಸರ್ಕಾರಿ ಶಾಲೆಯ ಮಕ್ಕಳು ಇಂತಹ ಪ್ರಯತ್ನ ಮಾಡುತ್ತಿರುವುದು ನಿಜಕ್ಕೂ ದೊಡ್ಡ ಸಾಧನೆ ಎಂದು ಹೂಡಿ ವಾರ್ಡ್ ಬಿಬಿಎಂಪಿ ಸದಸ್ಯ ಬಿ.ಎ. ಬಸವರಾಜು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಅಲ್ಲದೆ, ಮುಂದಿನ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ತೋರಿದಲ್ಲಿ ಸೂಕ್ತ ನಗದು ಬಹುಮಾನ ನೀಡುವುದಾಗಿ ತಿಳಿಸಿದರು.ನೀಡಿದರು. ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿಪಟು ಎಚ್.ಎಸ್.ಪಿಳ್ಳಪ್ಪ, ಹೂಡಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸರೋಜಮ್ಮ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಎಚ್.ಎಂ. ವೆಂಕಟಸ್ವಾಮಿ, ಸಮಾಜ ಸೇವಕರಾದ ಎಚ್.ಎಸ್.ಮುನಿರಾಜು, ವೆಂಕಟಪ್ಪ ಉಪಸ್ಥಿತರಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.