ಸೋಮವಾರ, ಜೂನ್ 21, 2021
29 °C

ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಪುಟ್ಟಣ್ಣಯ್ಯ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು 150 ಕೋಟಿ ರೂಪಾಯಿಗೂ ಹೆಚ್ಚು ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡಿವೆ. ಕೂಡಲೇ ಹಣ ಪಾವತಿಗೆ ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ಶಾಸಕ ಕೆ.ಎಸ್‌. ಪುಟ್ಟಣ್ಣಯ್ಯ ಆಗ್ರಹಿಸಿದರು.ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪ್ರತಿ ಟನ್‌ ಕಬ್ಬಿಗೆ 2650 ರೂಪಾಯಿ ಬೆಲೆ ಘೋಷಿಸಿತ್ತು. ಕೆಲವು ಕಾರ್ಖಾನೆಗಳು ಆ ಬೆಲೆ ನೀಡುತ್ತಿಲ್ಲ. ರಾಜ್ಯ ಸಲಹಾ ಬೆಲೆ ನೀತಿಯನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಒಂದು ವಾರದಲ್ಲಿ ಹಣ ಪಾವತಿಸದಿದ್ದರೆ, ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.ನಾಲೆಗಳ ಆಧುನೀಕರಣ ಕಾಮಗಾರಿಗೆ 400 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆದರೆ, ಕಾಮಗಾರಿ ನನೆಗುದಿಗೆ ಬಿದ್ದಿದೆ. ನಾಲೆ ಆಧುನೀಕರಣ ಕಾಮಗಾರಿ ಸರಿಯಾಗಿ ಸಮಯದಲ್ಲಿ ಆರಂಭಿಸಲು ಒತ್ತಡ ಹೇರುವಲ್ಲಿ ಜಿಲ್ಲೆಯ ಶಾಸಕರು ಹಾಗೂ ಚಳವಳಿಗಾರರು ವಿಫಲವಾಗಿದ್ದೇವೆ ಎಂದು ಒಪ್ಪಿಕೊಂಡರು.ಸಂಪತ್‌ ರಿಫೈನರಿ ತೈಲ ಘಟಕದಲ್ಲಿ ಐವರು ಸಾವನ್ನಪ್ಪಿದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು. ಕಾರ್ಮಿಕ ಇಲಾಖೆ ಈ ಪ್ರಕರಣದ ಬಗೆಗೆ ಮೌನ ವಹಿಸಿರುವುದು ಸರಿಯಲ್ಲ. ಪ್ರತಿಯೊಬ್ಬನ ಮೃತನ ಕುಟುಂಬಕ್ಕೆ 20 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಕೊಡಗಿನಲ್ಲಿ ವಿದ್ಯುತ್‌ ಮಾರ್ಗ ನಿರ್ಮಾಣಕ್ಕಾಗಿ ಮರಗಳನ್ನು ಕಡಿಯಲಾಗುತ್ತಿದೆ. ಇದನ್ನು ತಡೆಯಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು. ವಿದ್ಯುತ್‌ ಮಾರ್ಗವನ್ನು ಕಾಡಿನೊಳಗೆ ಒಯ್ಯುವ ಬದಲು ಪರ್ಯಾಯ ಮಾರ್ಗ ಅನುಸರಿಸಬೇಕು ಎಂದು ಒತ್ತಾಯಿಸಿದರು.ಎತ್ತಿನಹೊಳೆ ಯೋಜನೆ ಜಾರಿಯಿಂದ ಈಗ ಊಹಿಸಿದಷ್ಟು ನೀರು ಸಿಗುತ್ತದೆ ಎಂದು ನನಗೆ ಅನಿಸುವುದಿಲ್ಲ. ಯೋಜನೆ ಜಾರಿ ಬಗ್ಗೆ ಯೋಜನೆ ವ್ಯಾಪ್ತಿಗೆ ಒಳಪಡುವ ಎಲ್ಲ ಜಿಲ್ಲೆಗಳ ರೈತರು ಒಂದೆಡೆ ಸೇರಿ ಚರ್ಚೆ ನಡೆಸಬೇಕು. ಆಮೇಲೆ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು.ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗೆಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ಈ ಕುರಿತು ಚರ್ಚೆ ಮಾಡಲಾಗುತ್ತಿದೆ ಎಂದರು.ಜಿಲ್ಲಾ ಘಟಕದ ಅಧ್ಯಕ್ಷ ಕೋಣಸಾಲೆ ನರಸರಾಜು, ಶಂಭುನಹಳ್ಳಿ ಸುರೇಶ್‌್, ಸೋಮಶೇಖರ್‌, ರಾಮಕೃಷ್ಣಯ್ಯ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.