ಬುಧವಾರ, ಜೂನ್ 23, 2021
28 °C

ಕಬ್ಬು ಬೆಳೆಗೆ ಯೋಗ್ಯ ಬೆಲೆೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಪ್ರತಿ ಟನ್ ಕಬ್ಬಿಗೆ ಯೋಗ್ಯ ಬೆಲೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಬೇರೆ ರಾಜ್ಯಗಳಲ್ಲಿ ಪ್ರತಿ ಟನ್ ಕಬ್ಬಿಗೆ 2500 ರೂಪಾಯಿವರೆಗೂ ನೀಡುತ್ತಿದ್ದಾರೆ. ಆದರೆ ಇಲ್ಲಿ ಮಾತ್ರ 1800 ರೂಪಾಯಿಯಿಂದ 2 ಸಾವಿರ ರೂಪಾಯಿಯವರೆಗೆ ನೀಡಲಾಗುತ್ತಿದೆ. ಇದರಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.ಶಾಸನಬದ್ಧ ಬೆಲೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘವು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅವರ ಹೋರಾಟಕ್ಕೆ ಬೆಂಬಲ ನೀಡಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.ರಾಜ್ಯದ ರೈತರನ್ನು ಶೋಷಿಸುತ್ತಿರುವ ಸಕ್ಕರೆ ಕಾರ್ಖಾನೆಗಳ ಲಾಬಿಯನ್ನು ನಿಯಂತ್ರಿಸಿ ರೈತರಿಗೆ ಯೋಗ್ಯ ಬೆಲೆ ನೀಡದಿದ್ದರೆ ಕೃಷಿಕ ಸಮಾಜದ ವತಿಯಿಂದ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ರೈತರ ಕಬ್ಬಿಗೆ ಉತ್ತಮ ಬೆಲೆ ಕೊಡಿಸಲು ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ರಾಜ್ಯಪಾಲರನ್ನು ಆಗ್ರಹಿಸಲಾಗಿದೆ.ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಳಜ್ಜ ಗೋದಳ್ಳಿ, ಜಿಲ್ಲಾ ಘಟಕದ ಅಧ್ಯಕ್ಷ ಸಿದಗೌಡ ಮೋದಗಿ, ಶಂಕರ ಮಾಡಲಗಿ ಮತ್ತಿತರರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.