ಕಮಲಾ ಹಂಪನಾಗೆ ಅಹಿಂಸಾ ಪ್ರಶಸ್ತಿ

7

ಕಮಲಾ ಹಂಪನಾಗೆ ಅಹಿಂಸಾ ಪ್ರಶಸ್ತಿ

Published:
Updated:

ಬೆಂಗಳೂರು: ನವದೆಹಲಿಯ ಅಹಿಂಸಾ ಇಂಟರ್‌ನ್ಯಾಷನಲ್ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ `ಅಹಿಂಸಾ ಇಂಟರ್‌ನ್ಯಾಷನಲ್ ಪ್ರಶಸ್ತಿ'ಗೆ  ಹಿರಿಯ ಸಾಹಿತಿ ನಾಡೋಜ ಪ್ರೊ.ಕಮಲಾ ಹಂಪನಾ ಅವರನ್ನು ಆಯ್ಕೆ ಮಾಡಲಾಗಿದೆ.ಭಾರತೀಯ ಸಾಹಿತ್ಯ, ಸಂಸ್ಕೃತಿ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿತ್ತಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 30 ರಂದು ನವದೆಹಲಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry