ಕರವೇ ಅಧ್ಯಕ್ಷರಿಂದ ಜೀವ ಬೆದರಿಕೆ

7

ಕರವೇ ಅಧ್ಯಕ್ಷರಿಂದ ಜೀವ ಬೆದರಿಕೆ

Published:
Updated:

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಮತ್ತು ಸಂಘಟನೆಯ ಪದಾಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಗ್ರಹಾರ ದಾಸರಹಳ್ಳಿ ನಿವಾಸಿ ನಾಗರಾಜ್ ಎಂಬುವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.`ಕೊಲೆ ಮಾಡುವುದಾಗಿ ಮತ್ತು ನನ್ನ ಗ್ಯಾಸ್ ಏಜೆನ್ಸಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ~ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ನಾರಾಯಣಗೌಡ, ಮೋಹನ್, ನಾಗೆಂದ್ರ ಬಾಬು, ಕೀರ್ತಿ ಸೇರಿದಂತೆ ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

 

ಈ ಬಗ್ಗೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿದ್ದ ನಾಗರಾಜ್ ಅವರು ಹುದ್ದೆಗೆ ಕೆಲ ದಿನಗಳ ಹಿಂದೆ ರಾಜೀನಾಮೆ ನೀಡಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry