ಕರಾಳ ದಿನಾಚರಣೆ ಇಲ್ಲ: ಉಪನ್ಯಾಸಕರ ಸಂಘ ಸ್ಪಷ್ಟನೆ

7

ಕರಾಳ ದಿನಾಚರಣೆ ಇಲ್ಲ: ಉಪನ್ಯಾಸಕರ ಸಂಘ ಸ್ಪಷ್ಟನೆ

Published:
Updated:

ಬೆಂಗಳೂರು: ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನಾಚರಣೆಯಾಗಿ ಆಚರಿಸದೇ ಇರಲು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ನಿರ್ಧರಿಸಿದೆ.     ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಶಿಕ್ಷಣ ಸಚಿವರು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಸಂಘದ ಕಾರ್ಯದರ್ಶಿ ಹಂ.ಗು.ರಾಜೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸರ್ಕಾರ ಉಪನ್ಯಾಸಕರ ಬೇಡಿಕೆಗಳನ್ನು ಕೂಡಲೇ ಈಡೇರಿಸದಿದ್ದರೆ, ಮತ್ತೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಕಳೆದ ಮೂರು ವರ್ಷಗಳಿಂದ ಉಪನ್ಯಾಸಕರು ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸುತ್ತಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry