ಕರಾವಳಿ ಸೌಹಾರ್ದ ಸಂಘರ್ಷ ಸಮಿತಿ ಅಸ್ತಿತ್ವಕ್ಕೆ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542

ಕರಾವಳಿ ಸೌಹಾರ್ದ ಸಂಘರ್ಷ ಸಮಿತಿ ಅಸ್ತಿತ್ವಕ್ಕೆ

Published:
Updated:

ಮಂಗಳೂರು: ಕರಾವಳಿಯಲ್ಲಿ ಸಂಸ್ಕೃತಿ ರಕ್ಷಣೆ ಹೆಸರಿನಲ್ಲಿ ಸಂಘ ಪರಿವಾರದ ಗುಂಪುಗಳು ಕಾನೂನು ಕೈಗೆತ್ತಿಕೊಳ್ಳುವುದನ್ನು, ಕೋಮುದ್ವೇಷ ಹರಡುವುದನ್ನು ತಡೆಯುವ ಉದ್ದೇಶದಿಂದ `ಸೌಹಾರ್ದಕ್ಕಾಗಿ ಸಂಘರ್ಷ~ ಎಂಬ ಧ್ಯೇಯದೊಂದಿಗೆ `ಕರಾವಳಿ ಸೌಹಾರ್ದ ಸಂಘರ್ಷ ಸಮಿತಿ~ ಅಸ್ತಿತ್ವಕ್ಕೆ ಬಂದಿದೆ.ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಸಮಿತಿಯ ಅಧ್ಯಕ್ಷ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ, `ಹೋಂ ಸ್ಟೇ ಮೇಲಿನ ದಾಳಿ ವಿರೋಧಿಸಿ ಸಮಿತಿ ನೇತೃತ್ವದಲ್ಲಿ ಸೆ.4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ‌್ಯಾಲಿ ಹಾಗೂ ಪ್ರತಿಭಟನಾ ಸಭೆ ನಡೆಯಲಿದೆ. ಈ ಸಂಘಟನೆ ಕೇವಲ ಹೋಂ ಸ್ಟೇ ಮೇಲಿನ ದಾಳಿಯನ್ನು ವಿರೋಧಿಸುವ ಸಲುವಾಗಿ ಹುಟ್ಟಿಕೊಂಡಿದ್ದಲ್ಲ. ಇಂತಹ ದಾಳಿ ಮರುಕಳಿಸುವುದನ್ನು ತಡೆಯುವುದು ನಮ್ಮ ಮುಖ್ಯ ಉದ್ದೇಶ.   ಎಂದರು.ಸಿಪಿಎಂ ಮುಖಂಡ ಬಿ.ಮಾಧವ ಮಾತನಾಡಿ, `ಸರ್ಕಾರದ ಬೆಂಬಲದಿಂದಲೇ ಸಂಘ ಪರಿವಾರ ಇಂತಹ ಪುಂಡಾಟಿಕೆ ನಡೆಸುತ್ತಿದೆ. ಇಂತಹ ಕೃತ್ಯಗಳ ವಿರುದ್ಧ ರಾಜಕೀಯೇತರವಾಗಿ ಜನಜಾಗೃತಿ ಮೂಡಿಸುತ್ತೇವೆ~ ಎಂದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry