ಭಾನುವಾರ, ಏಪ್ರಿಲ್ 11, 2021
22 °C

ಕರಿಮಸೂತಿ ಏತ ನೀರಾವರಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ: `ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಖಿಳೆಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ, 600 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಘೋಷಿಸಿದರು.



ತಾಲ್ಲೂಕಿನ ಕಟಗೇರಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಭಾನುವಾರ ಹಿಪ್ಪರಗಿ ನೀರಾವರಿ ಯೋಜನೆಯ ಹಲ್ಯಾಳ, ಕರಿಮಸೂತಿ ಏತ ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. `ತಾಲ್ಲೂಕಿನ ಉತ್ತರ ಗಡಿ ಭಾಗದ 22 ಗ್ರಾಮಗಳ ಸುಮಾರು 70,000 ಎಕರೆ ಭೂಮಿಗೆ ನೀರಾವರಿ ಸೌಕರ್ಯ ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಾಗುವುದು~ ಎಂದರು.



ಕೃಷಿ ಕಾಲೇಜಿಗೆ ಒಪ್ಪಿಗೆ
: ಅಥಣಿ ಶಾಸಕ ಲಕ್ಷ್ಮಣ ಸವದಿ ಮನವಿಗೆ ಸ್ಪಂದಿಸಿದ ಶೆಟ್ಟರ್, `ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಲಾಗುವುದು. ಕೃಷಿ ಇಲಾಖೆಯಿಂದ ಈ ಕುರಿತು ಪ್ರಸ್ತಾವ ಬಂದ ತಕ್ಷಣವೇ ಮಂಜೂರಾತಿ ನೀಡಲಾಗುವುದು.



`ನವೆಂಬರ್- ಡಿಸೆಂಬರ್‌ನಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುವುದು. ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯನ್ನು ನೋಡಿ ಪಕ್ಕದ ಮಹಾರಾಷ್ಟ್ರದ ಅನೇಕ ಹಳ್ಳಿಗಳು ರಾಜ್ಯಕ್ಕೆ ಸೇರ್ಪಡೆಯಾಗಲು ನಿರ್ಣಯ ಅಂಗೀಕರಿಸಿವೆ~ ಎಂದು ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.