ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧಕ್ರಮ

7

ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧಕ್ರಮ

Published:
Updated:

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ ಎಂಟು ವಲಯಗಳ ವ್ಯಾಪ್ತಿಯ ಕಚೇರಿಗಳಿಗೆ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಆಯುಕ್ತರಿಗೆ ಶಿಫಾರಸು ಮಾಡಲಾಗುವುದು ಎಂದು ಮೇಯರ್ ಡಿ. ವೆಂಕಟೇಶಮೂರ್ತಿ ಎಚ್ಚರಿಕೆ ನೀಡಿದ್ದಾರೆ.ಪಾಲಿಕೆ ಕೇಂದ್ರ ಕಚೇರಿಯ ನಾಗರಿಕ ಸೇವಾ ಕೇಂದ್ರ, ನಿಯಂತ್ರಣ ಕೊಠಡಿ, ಲೆಕ್ಕಪತ್ರಗಳ ವಿಭಾಗ ಹಾಗೂ ಆಡಳಿತ ವಿಭಾಗಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಹಾಜರಾತಿ ಪುಸ್ತಕ ಪರಿಶೀಲಿಸಿದ ಅವರು, ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧ ಕೆಂಡಾಮಂಡಲವಾದರು. ಅಲ್ಲದೆ, ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಸ್ಥಳದಲ್ಲಿಯೇ ಉಪಸ್ಥಿತರಿದ್ದ ಹೆಚ್ಚುವರಿ ಆಯುಕ್ತರಿಗೆ (ಆಡಳಿತ) ಸೂಚನೆ ನೀಡಿದರು.ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗಬೇಕು. ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry