ಗುರುವಾರ , ಏಪ್ರಿಲ್ 15, 2021
20 °C

ಕರ್ತವ್ಯಲೋಪ: ಪಿಐ, ಪಿಎಸ್‌ಐ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ:  ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಬೈಲಹೊಂಗಲದ ಪೊಲೀಸ್ ಇನ್‌ಸ್ಪೆಕ್ಟರ್ ಅರುಣಕುಮಾರ ಹಪ್ಪಳಿ ಹಾಗೂ ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸ್ ಸಬ್ ಇನಸ್ಪೆಕ್ಟರ್ ಸುರೇಶ ಶಿಂಗೆ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ ಪಾಟೀಲ ಅಮಾನತುಗೊಳಿಸಿದ್ದಾರೆ.`ಬೈಲಹೊಂಗಲದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಿಐ ಹಪ್ಪಳಿ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ದಾಖಲಿಸಿದ್ದರು.  ಅಪಘಾತಕ್ಕೀಡಾದ ವಾಹನ ಬಿಟ್ಟು ಬೇರೆ ವಾಹನದ ಸಂಖ್ಯೆಯನ್ನು ದೂರಿನಲ್ಲಿ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಿ, ಆರೋಪ ಸಾಬೀತಾಗಿದ್ದರಿಂದ ಅವರನ್ನು ಅಮಾನತುಗೊಳಿಸಲಾಗಿದೆ~ ಎಂದು ಎಸ್‌ಪಿ ಸಂದೀಪ ಪಾಟೀಲ `ಪ್ರಜಾವಾಣಿ~ಗೆ ತಿಳಿಸಿದರು.`ಬೆಳಗಾವಿ ಗ್ರಾಮೀಣ ಠಾಣೆಯ ಪಿಎಸ್‌ಐ ಸುರೇಶ ಶಿಂಗೆ ಅವರು ಮಟಕಾ ಚಟುವಟಿಕೆ ನಿಯಂತ್ರಣಕ್ಕೆ ಪ್ರಯತ್ನಿಸದ ಬಗ್ಗೆ ಆಪಾದನೆಗಳಿದ್ದವು. ಅಲ್ಲದೇ ಮುಷ್ಕರ ನಿರತ ಎಂಜನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು. ಈ ಕುರಿತು ತನಿಖೆ ನಡೆಸಿದ್ದು, ಸಾಬೀತಾಗಿದ್ದರಿಂದ ಅವರನ್ನು ಅಮಾನತುಗೊಳಿಸಲಾಗಿದೆ~ ಎಂದು ಅವರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.