ಕರ್ತವ್ಯ ಲೋಪ: ಅಮಾನತು

7

ಕರ್ತವ್ಯ ಲೋಪ: ಅಮಾನತು

Published:
Updated:

ಬೆಂಗಳೂರು: ಕರ್ತವ್ಯ ಲೋಪ ಆರೋಪದ ಮೇಲೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಬ್ ಇನ್‌ಸ್ಪೆಕ್ಟರ್ ಖಲಂದರ್ ಖಾನ್ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.`ವಿದೇಶಿಯರು ನಕಲಿ ಪಾಸ್‌ಪೋರ್ಟ್ ಹಾಗೂ ವೀಸಾ ಬಳಕೆ ಮಾಡಿರುವ ವಿಷಯ ತಿಳಿದಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಒಂದು ವರ್ಷದ ಹಿಂದೆಯೇ ಈ ಪ್ರಕರಣ ನಡೆದಿದ್ದು, ಇತ್ತೀಚಿನ ಸಭೆಯೊಂದರಲ್ಲಿ ವಿಷಯ ಬೆಳಕಿಗೆ ಬಂತು. ಇದರ ತನಿಖೆಗೆ ಸಮಿತಿಯೊಂದನ್ನು ರಚನೆ ಮಾಡಿ, ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಖಾನ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಶುಕ್ರವಾರ ನಗರ ಪೊಲೀಸ್ ಕಮಿಷನರ್ ಜ್ಯೋತಿ ಪ್ರಕಾಶ್ ಮಿರ್ಜಿ ಆದೇಶ ನೀಡಿದ್ದಾರೆ~ ಎಂದು ಈಶಾನ್ಯ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ ತಿಳಿಸಿದರು.ಇದಕ್ಕೂ ಮುನ್ನ 15 ಬಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು ಎಂದು ಅವರು ಮಾಹಿತಿ ನೀಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry