ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಿಂದ ಬೃಹತ್ ರ‌್ಯಾಲಿ

ಸೋಮವಾರ, ಮೇ 20, 2019
28 °C

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಿಂದ ಬೃಹತ್ ರ‌್ಯಾಲಿ

Published:
Updated:

ಬೆಂಗಳೂರು:  ಮಂಗಳೂರಿನಲ್ಲಿರುವ `ಮಾರ್ನಿಂಗ್‌ಮಿಸ್ಟ್~  ಹೋಂ ಸ್ಟೇ  ಮೇಲೆ ನಡೆದ ದಾಳಿಯನ್ನು ವಿರೋಧಿಸಿ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯು ಆಗಸ್ಟ್ 4 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಬೃಹತ್ ರ‌್ಯಾಲಿಯನ್ನು ಹಮ್ಮಿಕೊಂಡಿದೆ.ಈ ಬಗ್ಗೆ ಗುರುವಾರ ಮಾಹಿತಿ  ನೀಡಿದ ವೇದಿಕೆಯ ಅಧ್ಯಕ್ಷ ಕೆ.ಎಲ್.ಅಶೋಕ, `ದಾಳಿಯನ್ನು ಸಂಪೂರ್ಣವಾಗಿ ಚಿತ್ರೀಕರಿಸುವ ಮೂಲಕ ಸಂಸ್ಕೃತಿ ರಕ್ಷಕರು ಎಂದು ಹೇಳಿಕೊಳ್ಳುವ ಪುಂಡರ ಕಾಮುಕತನವನ್ನು ಜನರಿಗೆ ತಿಳಿಸಿದ ಪತ್ರಕರ್ತರ ವಿರುದ್ಧ ಮೊಕದ್ದಮೆ ಹೂಡಲಾಗಿದ್ದು, ವೃತ್ತಿಧರ್ಮವನ್ನು ಪಾಲಿಸಿದ ವರದಿಗಾರರ ಮೇಲಿರುವ ಮೊಕದ್ದಮೆಯನ್ನ ಕೂಡಲೇ ಹಿಂಪಡೆಯಬೇಕು~ ಎಂದು ಆಗ್ರಹಿಸಿದರು.ವೇದಿಕೆಯ ಎ.ಕೆ.ಸುಬ್ಬಯ್ಯ, ಸಾಹಿತಿ ಬಿ.ಟಿ.ಲಲಿತಾನಾಯಕ್ ವೇದಿಕೆಯ ಫಕೀರ್ ಮಹಮ್ಮದ್ ಕಟ್ಟಾಡಿ, ಎನ್.ವೆಂಕಟೇಶ್, ದಿನಕರ ಎಸ್.ಬೇಂಗ್ರೆ, ಸರ್ದಾರ್ ಅಹ್ಮದ್ ಖುರೇಷಿ ಇತರರು ಉಪಸ್ಥಿತರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry