ಸೋಮವಾರ, ಜುಲೈ 26, 2021
24 °C
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಕಲಬುರ್ಗಿ ಹತ್ಯೆ ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಕರ್ನಾಟಕದ ಪ್ರಸಿದ್ಧ ಇತಿಹಾಸಕಾರ ಹಾಗೂ ಸಂಶೋಧಕರಾಗಿದ್ದ ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆಯನ್ನು ಭೇದಿಸಲು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದರು.ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಲಬುರ್ಗಿ ಅವರ ಹತ್ಯೆಯ ಸತ್ಯಾಂಶವನ್ನು ಹೊರಗೆಡವಲು ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಹೇಳಿದರು.ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸುವಂತೆ ಮಠಾಧೀಶರು ಹಾಗೂ ಕಲಬುರ್ಗಿ ಅವರ ಬೆಂಬಲಿಗರು ಭಾನುವಾರ ಒತ್ತಾಯ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.