ಕಲಾಪ ಪ್ರಸಾರಕ್ಕೆ ಖಾಸಗಿ ಟಿವಿಗಳಿಗೆ ನಿರ್ಬಂಧ ಚಿಂತನೆ

7

ಕಲಾಪ ಪ್ರಸಾರಕ್ಕೆ ಖಾಸಗಿ ಟಿವಿಗಳಿಗೆ ನಿರ್ಬಂಧ ಚಿಂತನೆ

Published:
Updated:

ಚಿಕ್ಕಮಗಳೂರು: ವಿಧಾನಮಂಡಲ ಕಲಾಪಗಳನ್ನು ಖಾಸಗಿ ವಾಹಿನಿಗಳು ನೇರವಾಗಿ ಸೆರೆ ಹಿಡಿದು ಪ್ರಸಾರ ಮಾಡುವುದನ್ನು ನಿರ್ಬಂಧಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.ನಗರದಲ್ಲಿ ಸೋಮವಾರ ನಗರಸಭೆ ನೌಕರರ ಪುನಶ್ಚೇತನ ಕಾರ್ಯಾಗಾರದಲ್ಲಿ ಪಾಲ್ಗೊಂಡು  ಅವರು `ಪ್ರಜಾವಾಣಿ~ ಜತೆ ಮಾತನಾಡಿದರು.ಲೋಕಸಭೆಯಲ್ಲಿ ಇರುವಂತೆ ಸರ್ಕಾರಿ ಸ್ವಾಮ್ಯದ ವಾಹಿನಿ ಮಾತ್ರವೇ ಕಲಾಪವನ್ನು ಚಿತ್ರೀಕರಿಸಿ ನಂತರ ಖಾಸಗಿ ಚಾನೆಲ್‌ಗಳಿಗೆ ವಿತರಿಸುವ ವ್ಯವಸ್ಥೆಯನ್ನು ರಾಜ್ಯದಲ್ಲಿಯೂ ಅಳವಡಿಸಿಕೊಳ್ಳುವುದು ಸೂಕ್ತ. ಕೇಂದ್ರದಿಂದಲೂ ಈ ಬಗ್ಗೆ ಮಾರ್ಗದರ್ಶಿ ಸೂತ್ರ ಬಂದಿದ್ದು, ಪರಿಶೀಲಿಸಲಾಗುತ್ತಿದೆ.ಈ ವಿಧಾನ ಅಳವಡಿಸಿಕೊಳ್ಳಲು ಹೆಚ್ಚು ವೆಚ್ಚವಾಗಬಹುದು. ಆದರೆ ಹಣದ ಸಮಸ್ಯೆಯೇನೂ ಎದುರಾಗುವುದಿಲ್ಲ. ಈ ಬಗ್ಗೆ ಸಾಕಷ್ಟು ಚಿಂತಿಸಿ ಕಾರ್ಯರೂಪಕ್ಕೆ ತರುವ ಉದ್ದೇಶವಿದೆ ಎಂದು ಅವರು ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry