ಕಲಾವಿದರಿಗೆ ಮಾಸಾಶನ ಸಿಗಲಿ

ಬುಧವಾರ, ಮೇ 22, 2019
32 °C

ಕಲಾವಿದರಿಗೆ ಮಾಸಾಶನ ಸಿಗಲಿ

Published:
Updated:

ಕನ್ನಡ ಮತ್ತು ಸಂಸ್ಕೃತಿ ಸಚಿವರು ಸೆಪ್ಟೆಂಬರ್ 6 ರಂದು ಕರ್ನಾಟಕ ನಾಟಕ ಅಕಾಡೆಮಿಯ ಸುವರ್ಣ ಮಹೋತ್ಸವದ ಅಂಗವಾಗಿ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಬಡ ಕಲಾವಿದರಿಗೆ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲ ಮತ್ತು ವೃದ್ಧಾಪ್ಯದಿಂದಾಗಿ ಹಲವು ರೀತಿ ಕಾಯಿಲೆಗಳು ಕಾಡುತ್ತಿವೆ.  ಇದಕ್ಕಾಗಿ ಹೊಸ ಯೋಜನೆಗೆ ಪ್ರಯತ್ನ ನಡೆಯುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿರುತ್ತಾರೆ. ಇದು ನೂರಕ್ಕೆ ನೂರು ಸತ್ಯ.ಹೀಗೆ 6-7 ವರ್ಷಗಳಿಂದ ಮಾಸಾಶನಕ್ಕಾಗಿ ಅರ್ಜಿ ನೊಂದಾಯಿಸಿದ್ದು ಅಕಾಡೆಮಿಯಿಂದ ಸಂದರ್ಶನ ಪೂರ್ಣಗೊಂಡಿದ್ದು ಮುಂದಿನ ಆದೇಶಕ್ಕಾಗಿ ಸುಮಾರು 3000 ಮಂದಿ ಕಲಾವಿದರು ಮಾಸಾಶನಕ್ಕಾಗಿ ಕಾಯುತ್ತಿದ್ದಾರೆ.ಈ ವಿಷಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ನಿರ್ದೇಶಕರು ಹೇಳುತ್ತಿದ್ದಾರೆ.ಆದರೆ ಈ ಬಗ್ಗೆ ಸರ್ಕಾರ ಕೂಡಲೇ ಕ್ರಮಕೈಗೊಂಡು ಕಲಾವಿದರಿಗೆ ಮಾಸಾಶನ ಸಿಗುವಂತೆ ಮಾಡಲಿ ಎಂದು ವಿನಂತಿಸುವೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry