ಸೋಮವಾರ, ಏಪ್ರಿಲ್ 19, 2021
23 °C

ಕಲಾವೈಭವ 25ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಕೈಗಾರಿಕೆ ಇಲಾಖೆ ಆಶ್ರಯದಲ್ಲಿ ನಗರದ ರವೀಂದ್ರನಾಥ ಕಡಲತೀರದಲ್ಲಿ ಏ. 25ರಿಂದ ಮೇ 4ರ ವರೆಗೆ ಕಲಾ ವೈಭವ ಕಾರ್ಯಕ್ರಮ ಸಂಘಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ತಿಳಿಸಿದರು.ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವುದು ಮತ್ತು ಸ್ಥಳೀಯ ಕಲಾವಿದರಿಗೆ ಅವಕಾಶ ನೀಡುವುದು ಕಲಾ ವೈಭವದ ಮುಖ್ಯ ಉದ್ದೇಶವಾಗಿದೆ ಎಂದರು.ಕಡಲತೀರದಲ್ಲಿ ಅಂದಾಜು 100 ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕೈಗಾರಿಕೋದ್ಯಮಿಗಳಿಗೆ ಮಳಿಗೆಗಳನ್ನು ಉಚಿತವಾಗಿ ನೀಡಲಾಗುವುದು. ಬೇರೆಯವರಿಗೆ ಮಳಿಗೆಯೊಂದಕ್ಕೆ ರೂ. 2500 ದರ ನಿಗದಿಪಡಿಸಲಾಗಿದೆ ಎಂದರು.ಕಲಾ ವೈಭವದಲ್ಲಿ ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜಿಲ್ಲೆಯ ಸಣ್ಣ ಕೈಗಾರಿಕೆಗಳು ಮತ್ತು ಸ್ವ ಸಹಾಯ ಸಂಘಗಳು ಹಾಗೂ ನೆರೆಯ ಜಿಲ್ಲೆಯವರು ಸಹ ಭಾಗವಹಿಸಿ ತಮ್ಮ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.ನಗರಸಭಾ ಅಧ್ಯಕ್ಷ ಗಣಪತಿ ಉಳ್ವೇಕರ್ ಪರಿಸರ ಸ್ನೇಹಿ ಬ್ಯಾಗ್ ಮತ್ತು ಪೋಸ್ಟರ್‌ಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರ. ಅಪರ ಜಿಲ್ಲಾಧಿಕಾರಿ ಡಾ. ಕೆ.ಎಚ್. ನರಸಿಂಹಮೂರ್ತಿ ಕೈಪಿಡಿ ಬಿಡುಗಡೆ ಮಾಡಿದರು.ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೆಶಕ ಗೋಪಾಲಕೃಷ್ಣ ಬೇಕಲ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಏ.25ರಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಮಾ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಬೆಕಲ್ ತಿಳಿಸಿದರು.ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ವಿ.ಬಿ.ಗಾಂವ್ಕರ್ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.