ಕೇಂದ್ರೀಕೃತ ದಾಖಲಾತಿ ಘಟಕದ ಮೂಲಕ ನಡೆಯುತ್ತಿರುವ ಬಿ.ಎಡ್ ಕೋರ್ಸ್ ಪ್ರವೇಶಾತಿಯಲ್ಲಿ ಇದೇ ಮೊದಲ ಬಾರಿಗೆ ವಾಣಿಜ್ಯ ವಿಷಯದೊಂದಿಗೆ ಇತರ ಯಾವುದೇ ವಿಷಯದಲ್ಲಿ ಪದವಿ ಪಡೆದವರಿಗೂ ಅವಕಾಶ ನೀಡಲಾಗುತ್ತಿದೆ. ಜೊತೆಗೆ ಕಳೆದ ವರ್ಷದಿಂದ ಸಾಮಾನ್ಯ ಪ್ರವೇಶ ಪರೀಕ್ಷೆಯಿಲ್ಲದೆ ಪದವಿಯ ಅಂಕಗಳ ಆಧಾರದ ಮೇಲೆ ಆಯ್ಕೆಪಟ್ಟಿ ತಯಾರಿಸಲಾಗುತ್ತಿತ್ತು. ಈ ವರ್ಷ ವಾಣಿಜ್ಯ ವಿಭಾಗದವರಿ ರುವುದರಿಂದ ಶೇಕಡ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆಯಿದೆ.

ಆದ್ದರಿಂದ ಕಲಾ ವಿಭಾಗ ಮತ್ತು ವಾಣಿಜ್ಯ ವಿಭಾಗಕ್ಕೆ ಪ್ರತ್ಯೇಕ ಆಯ್ಕೆಪಟ್ಟಿ ತಯಾರಿಸಬೇಕಾದುದು ಅನಿವಾರ್ಯ, ಇಲ್ಲವಾದಲ್ಲಿ ವಾಣಿಜ್ಯದವರ ಅಂಕಗಳ ಎದುರು ಕಲಾ ವಿಭಾಗದವರಿಗೆ ಅನ್ಯಾಯವಾಗುವುದು. ಈ ಕುರಿತು ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ.
– ಶ್ರೀಕಾಂತ್, ಹಾಸನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.